HD Kumaraswamy: ಉಕ್ಕಿನ ಕಾರ್ಖಾನೆಯ ಪುನಶ್ಚೇತನಕ್ಕೆ ಕೇಂದ್ರದಿಂದ ಹಣ: ಎಚ್‌ಡಿ ಕುಮಾರಸ್ವಾಮಿ
ಮೈಸೂರು: ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕಿನ ಕಾರ್ಖಾನೆಯ ಪುನಶ್ಚೇತನಕ್ಕಾಗಿ 4 ಸಾವಿರದ 500 ರಿಂದ 5 ಸಾವಿರ ಕೋಟಿ ರೂಪಾಯಿ ಬಿಡುಗಡೆಗೊಳಿಸಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ತಿಳಿಸಿದ್ದಾರೆ. ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ಮೈಸೂರಿನಲ್ಲಿ ಕೇಂದ್ರ ಬಜೆಟ್ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025-2027ರ ಕೇಂದ್ರ ಬಜೆಟ್‌ನಲ್ಲಿ ಕಟ್ಟಡ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್…
