Heavy Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟ, ಆಸ್ತಿಪಾಸ್ತಿಗೆ ಹಾನಿ
ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಸುರಿದ ಭಾರಿ ಮಳೆಗೆ (Heavy Rain) ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಆಸ್ತಿಪಾಸ್ತಿಗೆ ಅಪಾರ ಹಾನಿ ಸಂಭವ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ, ಅರಿಶಿಣಗುಪ್ಪೆ, ಕೈಮರ, ಹುಕ್ಕುಂದ ಹಾಗೂ ಮುಳ್ಳಯ್ಯನಗಿರಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾದ ವರದಿಯಾಗಿದೆ. ಮೂಡಿಗೆರೆ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಾದ ಗಂಗನಮಕ್ಕಿ, ಬಿಳುಗುಳ, ಹಳ್ಳದಂಗಡಿ, ಹ್ಯಾಂಡ್ ಪೋಸ್ಟ್ ಮತ್ತು ಕೊಟ್ಟಿಗೆಹಾರ ಸೇರಿದಂತೆ ಹಲವೆಡೆ ಮಳೆಯ ಆರ್ಭಟಕ್ಕೆ…
