Huma Qureshi: ‘ಟಾಕ್ಸಿಕ್’ ಸಿನಿಮಾ ಪ್ರೇಕ್ಷಕರನ್ನು ಬೆಚ್ಚಿಬೀಳಿಸುವುದು ಗ್ಯಾರಂಟಿ: ನಿರ್ದೇಶಕಿ ಗೀತು ಮೋಹನ್ ದಾಸ್ ಕಾರ್ಯವೈಖರಿ ಕೊಂಡಾಡಿದ ಹುಮಾ ಖುರೇಷಿ!
ಮುಂಬೈ: ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಧೂಳೆಬ್ಬಿಸುತ್ತಿದೆ. ಈ ಗ್ಯಾಂಗ್‌ಸ್ಟರ್ ಆಕ್ಷನ್ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇರುವುದರಿಂದ ಅಭಿಮಾನಿಗಳಲ್ಲಿ ಕುತೂಹಲ ದುಪ್ಪಟ್ಟಾಗಿದೆ. ಈ ಚಿತ್ರದಲ್ಲಿ ಎಲಿಜಬೆತ್ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಾಲಿವುಡ್ ನಟಿ ಹುಮಾ ಖುರೇಷಿ, (Huma Qureshi) ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರದ ನಿರ್ದೇಶಕಿ ಗೀತು ಮೋಹನ್ ದಾಸ್ ಬಗ್ಗೆ ಮನಬಿಚ್ಚಿ ಮಾತನಾಡಿದ್ದು, ಈ ಸಿನಿಮಾ ಪ್ರೇಕ್ಷಕರನ್ನು ಬೆಚ್ಚಿಬೀಳಿಸುವುದು ಗ್ಯಾರಂಟಿ ಎಂದಿದ್ದಾರೆ. ಸಿನಿಮಾ ತಂಡವನ್ನ ಹೊಗಳಿದ…
