Crime: ಹುಣಸೂರಿನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ, ಮಾದಕ ವಸ್ತುಗಳ ವಶ
ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ (Crime) ಸುಮಾರು 12 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರು ಆರೋಪಿಗಳ ಬಂಧನ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ವಿಷಯವನ್ನು ಹಂಚಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಅಕ್ರಮ ಜಾಲದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಉತ್ತರ ನಗರ ಪಾಲಿಕೆ…
