Big News: ಹೋರಾಟಗಾರರ ವಿರೋಧಕ್ಕೆ ಮಣಿದ ಅಧಿಕಾರಿ?: ಧರ್ಮಸ್ಥಳ ಸೌಜನ್ಯ ಪ್ರಕರಣದ ತನಿಖಾ ಹೊಣೆಯಿಂದ ಹಿಂದೆ ಸರಿದ ಐಜಿಪಿ ಶಶಿಕುಮಾರ್
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಬಹುಚರ್ಚಿತ ಸೌಜನ್ಯ (Big News) ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಬೆಳವಣಿಗೆಯೊಂದು ನಡೆದಿದೆ. ಪ್ರಕರಣದ ಸಮಗ್ರ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (SIT) ಮುಖ್ಯಸ್ಥರ ಜವಾಬ್ದಾರಿಯಿಂದ ತಮ್ಮನ್ನು ಮುಕ್ತಗೊಳಿಸುವಂತೆ ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಐಜಿಪಿ ಶಶಿಕುಮಾರ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ (DG-IGP) ಎಂ.ಎ. ಸಲೀಂ ಅವರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ. 1. ತನಿಖಾಧಿಕಾರಿ ನೇಮಕಕ್ಕೆ ಹೋರಾಟಗಾರರ ತೀವ್ರ ವಿರೋಧ ಸೌಜನ್ಯ ಹತ್ಯೆಗೆ ನ್ಯಾಯ…
