JPSC: ರಾಂಚಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಉಗ್ರ: ಪೊಲೀಸ್ ಲಾಠಿಚಾರ್ಜ್
ಜಾರ್ಖಂಡ್: ರಾಷ್ಟ್ರ ರಾಜಧಾನಿ ಮಾದರಿಯಲ್ಲಿ ಜಾರ್ಖಂಡ್‌ನ ರಾಂಚಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು ಸಿಬ್ಬಂದಿ ನೇಮಕಾತಿ ಆಯೋಗ (JSSC) ನಡೆಸುವ ಪರೀಕ್ಷೆಗಳ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಬೃಹತ್ ಪಾದಯಾತ್ರೆ ನಡೆಸಿದ ಸಾವಿರಾರು ವಿದ್ಯಾರ್ಥಿಗಳು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಬ್ಯಾರಿಕೇಡ್‌ಗಳನ್ನು ಮುರಿದು ಮುನ್ನುಗ್ಗಿದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಕಣ್ಣೀರು ಅನಿಲ, ವಾಟರ್ ಕ್ಯಾನನ್ ಹಾಗೂ ಲಾಠಿಚಾರ್ಜ್ ನಡೆಸಿದರು. ಚರ್ಚೆಯ ಮೂಲಕವೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು…
