Shocking: ಸರ್ಕಾರಿ ಹಾಸ್ಟೆಲ್‌ನಲ್ಲಿ ವಿಷಾಹಾರ ದುರಂತ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥ, ಆಸ್ಪತ್ರೆಗೆ ದಾಖಲು!
ಕಲಬುರಗಿ: ಸರ್ಕಾರಿ ಹಾಸ್ಟೆಲ್‌ನಲ್ಲಿ ನೀಡಲಾದ ರಾತ್ರಿಯ ಭೋಜನವನ್ನು ಸೇವಿಸಿದ ನಂತರ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ ಬೆಚ್ಚಿಬೀಳಿಸುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ (Shocking) ಪಟ್ಟಣದಲ್ಲಿದೆ. ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ವಸತಿ ನಿಲಯದಲ್ಲಿ ಈ ದುರಂತ ಸಂಭವಿಸಿದ್ದು, ವಿದ್ಯಾರ್ಥಿಗಳ ಆರೋಗ್ಯದಲ್ಲಿ ದಿಢೀರ್ ಏರುಪೇರಾದ ಹಿನ್ನೆಲೆಯಲ್ಲಿ ಪೋಷಕರು ಹಾಗೂ ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದೆ. ವಿಷಾಹಾರ ಸೇವನೆಯಿಂದ ಅಸ್ವಸ್ಥ: ವಸತಿ ನಿಲಯದಲ್ಲಿದ್ದ ವಿದ್ಯಾರ್ಥಿಗಳು ಎಂದಿನಂತೆ ರಾತ್ರಿಯ ವೇಳೆಗೆ ಹಾಸ್ಟೆಲ್ ಸಿಬ್ಬಂದಿ ಸಿದ್ಧಪಡಿಸಿದ್ದ…
