TOP NEWS
DK Shivakumar on Leadership Obstacles Are Inevitable for Every True Leader

DK Shivakumar: ಅಡಚಣೆಗಳನ್ನು ದಾಟಿ ಮುನ್ನಡೆಯುವುದೇ ನಾಯಕನ ಗುರಿ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: “ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ. ನಾನು ಏಳನೇ ತರಗತಿಯಿಂದ ಶಾಸಕನಾಗುವವರೆಗೂ ಅನೇಕ ಅಡಚಣೆಗಳನ್ನು ಎದುರಿಸಿ ಈಗ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿದ್ದೇನೆ. ಯುವಕರು ನಾಯಕರಾಗಲು ಮುಂದೆ ಬರಬೇಕು. ನಾಯಕನಾದವನು ನಾಯಕರನ್ನು ಸೃಷ್ಟಿಸಬೇಕು” ಎಂದು ಸಿಎಂ‌ ಡಿ ಕೆ ಶಿವಕುಮಾರ್ (DK Shivakumar) ಅವರು ಅಭಿಪ್ರಾಯಪಟ್ಟರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಂಗಳವಾರ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. “ಏಳನೇ ತರಗತಿ ಶಾಲಾ ಚುನಾವಣೆ, ಕಾಲೇಜು ಚುನಾವಣೆಗಳಲ್ಲೂ ನನಗೆ ತಕ್ಕ ನ್ಯಾಯ ಸಿಗಲಿಲ್ಲ. ಆನಂತರವೂ ವಿದ್ಯಾರ್ಥಿ…

Read More
big news Major Relief for Beneficiaries Karnataka Govt Relaxes Biometric Norms for Public Distribution System

Big News: ನೆಟ್‌ವರ್ಕ್ ಮತ್ತು ಇ-ಪಿಒಎಸ್ ಯಂತ್ರಗಳ ಸಮಸ್ಯೆಗೆ ಪರಿಹಾರ ಕಂಡುಕೊಂಡ ಆಹಾರ ಇಲಾಖೆ

ಬೆಂಗಳೂರು: ಕರ್ನಾಟಕ ಸರ್ಕಾರದ (Big News) ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರಾಜ್ಯದ ಬಡ ಹಾಗೂ ಅಗತ್ಯವಿರುವ ಫಲಾನುಭವಿಗಳಿಗೆ ನೀಡಲಾಗುವ ‘ಅನ್ನಭಾಗ್ಯ’ ಯೋಜನೆಯಲ್ಲಿ ಎದುರಾಗುತ್ತಿದ್ದ ತಾಂತ್ರಿಕ ತೊಡಕುಗಳನ್ನು ನಿವಾರಿಸಲು ದೊಡ್ಡ ಹೆಜ್ಜೆ ಇಟ್ಟಿದೆ. ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ (PDS) ಬೆರಳಚ್ಚು (Biometric) ಮ್ಯಾಚ್ ಆಗದೆ ನ್ಯಾಯಬೆಲೆ ಅಂಗಡಿಗಳಿಂದ ಪಡಿತರ ಪಡೆಯಲಾಗದೆ ಬರಿಗೈಯಲ್ಲಿ ಹಿಂತಿರುಗುತ್ತಿದ್ದ ಸಾವಿರಾರು ವೃದ್ಧರು ಮತ್ತು ಶ್ರಮಿಕರಿಗೆ ಸರ್ಕಾರ ಈಗ ಬಿಗ್ ರಿಲೀಫ್ ನೀಡಿದೆ. ಬಯೋಮೆಟ್ರಿಕ್ ಸಮಸ್ಯೆಗೆ ಮುಖ್ಯ ಕಾರಣಗಳು ಪಡಿತರ ಪಡೆಯುವಾಗ…

Read More
Big news Substandard Shoes and Socks for Government School Students Lokayukta Initiates Inquiry

Big News: ವಿದ್ಯಾವಿಕಾಸ ಯೋಜನೆಯಡಿ ಕಳಪೆ ಪಾದರಕ್ಷೆಗಳ ಪೂರೈಕೆ: ಉಪ ಲೋಕಾಯುಕ್ತರಿಂದ ಸ್ವಯಂಪ್ರೇರಿತ ತನಿಖೆ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ವಿತರಿಸಲಾಗುತ್ತಿರುವ ಶೂ ಹಾಗೂ ಸಾಕ್ಸ್‌ಗಳ ಗುಣಮಟ್ಟದ ಕುರಿತು ಸಾರ್ವಜನಿಕ ವಲಯದಲ್ಲಿ ವ್ಯಾಪಕ (Big News) ಆಕ್ರೋಶ ವ್ಯಕ್ತವಾಗಿತ್ತು. ಮಕ್ಕಳ ಕಾಲ್ನಡಿಗೆ ಹಾಗೂ ಅನುಕೂಲಕ್ಕಾಗಿ ಅತ್ಯಂತ ಮುತುವರ್ಜಿಯಿಂದ ಜಾರಿಗೆ ತಂದ ಈ ಯೋಜನೆಯಡಿ ಕಳಪೆ ಮಟ್ಟದ ಪಾದರಕ್ಷೆಗಳನ್ನು ಪೂರೈಕೆ ಮಾಡಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ವಿದ್ಯಮಾನವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಇದರ ಹಿಂದೆ ನಡೆದಿರಬಹುದಾದ ಅಕ್ರಮಗಳು ಹಾಗೂ…

Read More
Celebrating 100 Days of dk shivakumar government Mysuru Palace Lit Up with Colorful Lights and LED Displays

DK Shivakumar: ಸರ್ಕಾರಕ್ಕೆ 100 ದಿನಗಳ ಸಂಭ್ರಮ: ಮೈಸೂರು ಅರಮನೆಯಲ್ಲಿ ಇಂದಿನಿಂದ 4 ದಿನಗಳ ಕಾಲ ವರ್ಣರಂಜಿತ ದೀಪಾಲಂಕಾರ

ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದ ನೂತನ ಸರ್ಕಾರ ಅಧಿಕಾರ ಸ್ವೀಕರಿಸಿ ಯಶಸ್ವಿಯಾಗಿ ನೂರು ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಮೈಸೂರು ಅರಮನೆ ಇಂದಿನಿಂದ ಸತತ ನಾಲ್ಕು ದಿನಗಳ ಕಾಲ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಆಕರ್ಷಕ ವರ್ಣರಂಜಿತ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಲಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಈ ವಿಶೇಷ ಪ್ರದರ್ಶನವನ್ನು ಅದ್ಧೂರಿಯಾಗಿ ಆಯೋಜಿಸಲಾಗಿದೆ. ಈ ದೀಪಾಲಂಕಾರದ ಸಂಭ್ರಮದ ಜೊತೆಗೆ, ಐತಿಹಾಸಿಕ ಜಯರಾಮ ಮಹಾದ್ವಾರದಲ್ಲಿ ಸರ್ಕಾರದ ಮಹತ್ವಾಕಾಂಕ್ಷೆಯ…

Read More
The Road to a Trillion Dollar Economy Inside DK Shivakumar Visionary Blueprint for Karnataka

DK Shivakumar: ಡಿಕೆ ಸರ್ಕಾರಕ್ಕೆ ನೂರರ ಸಂಭ್ರಮ: ಇಲ್ಲಿದೆ ವಿಶೇಷ ಕಾರ್ಯಕ್ರಮದ ಹೈಲೈಟ್ಸ್

ಬೆಂಗಳೂರು: ಕರ್ನಾಟಕದಲ್ಲಿ ಡಿ.ಕೆ. ಶಿವಕುಮಾರ್ (DK Shivakumar) ಸಾರಥ್ಯದ ಸರ್ಕಾರವು ಅಧಿಕಾರಕ್ಕೇರಿ ನೂರು ದಿನಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ. ಈ ಹೆಗ್ಗುರುತಿನ ಸಂಭ್ರಮಾಚರಣೆಯನ್ನು ಸ್ಮರಣೀಯವಾಗಿಸಲು ‘ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಹಾಗೂ ಅರ್ಥಪೂರ್ಣ ಕಾರ್ಯಕ್ರಮವನ್ನು ರೂಪಿಸಲಾಗಿದೆ. ರಾಜಧಾನಿ ಬೆಂಗಳೂರಿನ ಐತಿಹಾಸಿಕ ವಿಧಾನಸೌಧದ ಬ್ಯಾಂಕ್ವೇಟ್ ಸಭಾಂಗಣದಲ್ಲಿ 2026ರ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ ಸರಿಯಾಗಿ 10 ಗಂಟೆಗೆ ಈ ಮಹತ್ವದ ಸಮಾರಂಭವು ಅತ್ಯಂತ ವಿಜೃಂಭಣೆಯಿಂದ ನಡೆದಿದೆ. ಸರ್ಕಾರದ ನೂರು ದಿನಗಳ ಸಾಧನೆಗಳನ್ನು…

Read More
Employing Children Will Lead to Cop Suspensions CM DK Shivakumar Strict Warning at APMC Market

DK Shivakumar: ಮಕ್ಕಳಿಂದ ಕೆಲಸ ಮಾಡಿಸಿದರೆ ಪೊಲೀಸರ ಅಮಾನತು: ಎಪಿಎಂಸಿ ಮಾರುಕಟ್ಟೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ತಾಕೀತು

ಬೆಂಗಳೂರು: ರಾಜ್ಯದ ಮಾರುಕಟ್ಟೆಗಳಲ್ಲಿ ರೈತರು, ವರ್ತಕರು ಹಾಗೂ ಶ್ರಮಿಕ ವರ್ಗದವರು ಎದುರಿಸುತ್ತಿರುವ ಸಮಸ್ಯೆಗಳನ್ನು ನೇರವಾಗಿ ಮನಗಾಣುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಮಂಗಳವಾರ ಮುಂಜಾನೆ ಆರು ಗಂಟೆಗೆ ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಅನಿರೀಕ್ಷಿತ ಭೇಟಿ ನೀಡಿ ಸಕಲ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಳ್ಳಂಬೆಳಗ್ಗೆ ಮಾರುಕಟ್ಟೆಗೆ ಆಗಮಿಸಿದ ಅವರು, ಈರುಳ್ಳಿ, ಆಲೂಗಡ್ಡೆ, ಶುಂಠಿ ಹಾಗೂ ಬೆಳ್ಳುಳ್ಳಿ ಸೇರಿದಂತೆ ವಿವಿಧ ಮಾರುಕಟ್ಟೆ ವಿಭಾಗಗಳಿಗೆ ನಡೆದುಕೊಂಡೇ ತೆರಳಿ ವಹಿವಾಟುಗಳನ್ನು ವೀಕ್ಷಿಸಿದರು. ಈ ವೇಳೆ ಮಾರುಕಟ್ಟೆಯಲ್ಲಿ ಹಾಜರಿದ್ದ ರೈತರು,…

Read More
I Am a Public Servant Not a Monarch DK Shivakumar Rejects Regal Titles at Event

DK Shivakumar: ನನ್ನನ್ನು ದೊರೆ ಎಂದು ಕರೆಯಬೇಡಿ: ಸಾರ್ವಜನಿಕ ವೇದಿಕೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಬಿಗ್ ಸ್ಟೇಟ್‌ಮೆಂಟ್

ವಿಜಯನಗರ: ನಮ್ಮ ದೇಶದಲ್ಲಿ ಪ್ರಭುಗಳ ಕಾಲ ಮುಗಿದು ಪ್ರಜಾಪ್ರಭುತ್ವ ಬಂದಿದೆ, ನನ್ನನ್ನು ‘ನಾಡಿನ ದೊರೆ’ ಎಂದು ಕರೆಯುವ ಬದಲು ‘ಪ್ರಜಾಸೇವಕ’ ಎಂದು ಕರೆದರೆ ನನಗೆ ಅತ್ಯಂತ ಹೆಚ್ಚು ಸಂತೋಷವಾಗುತ್ತದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅಭಿಪ್ರಾಯ ವ್ಯಕ್ತಪಡಿಸಿದರು. ವಿಜಯನಗರ ಜಿಲ್ಲೆಯ ​ಕೂಡ್ಲಿಗಿ ಪಟ್ಟಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ನೂತನ ‘ಪ್ರಜಾಸೇವಾ ಇಲಾಖೆ’ಯ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ​”ಜನಸೇವೆಯೇ ಜನಾರ್ದನ ಸೇವೆ” ಎಂದು ನಂಬಿದವನು ನಾನು ಎಂದರು. ರಾಜ್ಯದ ಜನತೆ 136 ಶಾಸಕರನ್ನು ಗೆಲ್ಲಿಸಿಕೊಡುವ…

Read More