DK Shivakumar: ನನ್ನನ್ನು ದೊರೆ ಎಂದು ಕರೆಯಬೇಡಿ: ಸಾರ್ವಜನಿಕ ವೇದಿಕೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಬಿಗ್ ಸ್ಟೇಟ್‌ಮೆಂಟ್
ವಿಜಯನಗರ: ನಮ್ಮ ದೇಶದಲ್ಲಿ ಪ್ರಭುಗಳ ಕಾಲ ಮುಗಿದು ಪ್ರಜಾಪ್ರಭುತ್ವ ಬಂದಿದೆ, ನನ್ನನ್ನು ‘ನಾಡಿನ ದೊರೆ’ ಎಂದು ಕರೆಯುವ ಬದಲು ‘ಪ್ರಜಾಸೇವಕ’ ಎಂದು ಕರೆದರೆ ನನಗೆ ಅತ್ಯಂತ ಹೆಚ್ಚು ಸಂತೋಷವಾಗುತ್ತದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅಭಿಪ್ರಾಯ ವ್ಯಕ್ತಪಡಿಸಿದರು. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ನೂತನ ‘ಪ್ರಜಾಸೇವಾ ಇಲಾಖೆ’ಯ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ”ಜನಸೇವೆಯೇ ಜನಾರ್ದನ ಸೇವೆ” ಎಂದು ನಂಬಿದವನು ನಾನು ಎಂದರು. ರಾಜ್ಯದ ಜನತೆ 136 ಶಾಸಕರನ್ನು ಗೆಲ್ಲಿಸಿಕೊಡುವ…
