DK Shivakumar: ರಾಜ್ಯದ ವಸತಿ ಕಟ್ಟಡ ಮಾಲೀಕರಿಗೆ ಸರ್ಕಾರದಿಂದ ಬಿಗ್ ರಿಲೀಫ್: ಓಸಿ, ಸಿಸಿ ದಾಖಲೆ ಸಲ್ಲಿಕೆ ಅವಧಿ ಆಗಸ್ಟ್ 15 ರವರೆಗೆ ವಿಸ್ತರಣೆ!
ಬೆಂಗಳೂರು: ರಾಜ್ಯದ ಲಕ್ಷಾಂತರ ಮನೆ ಹಾಗೂ ಅಪಾರ್ಟ್‌ಮೆಂಟ್ ಮಾಲೀಕರಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ, ಕಟ್ಟಡಗಳ ಆಕ್ಯುಪೆನ್ಸಿ ಸರ್ಟಿಫಿಕೇಟ್ (OC) ಮತ್ತು ಕಮೆನ್ಸ್‌ಮೆಂಟ್ ಸರ್ಟಿಫಿಕೇಟ್ (CC) ಒದಗಿಸಲು ನಿಗದಿಪಡಿಸಲಾಗಿದ್ದ ಗಡುವನ್ನು ಮುಂಬರುವ ಆಗಸ್ಟ್ 15 ರವರೆಗೆ ಮುಂದುವರಿಸಲು ನಿರ್ಧರಿಸಲಾಗಿದೆ. ಸಾರ್ವಜನಿಕರ ಒತ್ತಾಯಕ್ಕೆ ಮಣಿದ ಸರ್ಕಾರ ಕಟ್ಟಡಗಳ ಮಾಲೀಕತ್ವ ಹಾಗೂ ನಿರ್ಮಾಣ ಪೂರ್ಣಗೊಂಡಿರುವ ಅಧಿಕೃತ ದಾಖಲೆಗಳ (ಓಸಿ-ಸಿಸಿ)…
