Job Alert: ಡಿಪ್ಲೊಮಾ ಪದವೀಧರರಿಗೆ ಸಿಹಿಸುದ್ದಿ: ಕೆಇಎಯಿಂದ 218 ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ತಾಂತ್ರಿಕ ಅಭ್ಯರ್ಥಿಗಳಿಗೆ, ವಿಶೇಷವಾಗಿ ಡಿಪ್ಲೊಮಾ ಪದವೀಧರರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಸಿಹಿಸುದ್ದಿಯೊಂದನ್ನು (Job Alert) ನೀಡಿದೆ. ರಾಜ್ಯ ಸರ್ಕಾರದ ವಿವಿಧ ಪ್ರಮುಖ ಇಲಾಖೆಗಳು, ನಿಗಮಗಳು ಹಾಗೂ ಮಂಡಳಿಗಳಲ್ಲಿ ಖಾಲಿ ಇರುವ ಒಟ್ಟು 218 ಗ್ರೂಪ್-ಸಿ (Group-C) ತಾಂತ್ರಿಕ ಹುದ್ದೆಗಳ ಭರ್ತಿಗಾಗಿ ಪ್ರತ್ಯೇಕ ಅಧಿಸೂಚನೆಗಳನ್ನು ಪ್ರಕಟಿಸಲಾಗಿದೆ. ಜೂನಿಯರ್ ಎಂಜಿನಿಯರ್ (ಸಿವಿಲ್), ಅಸಿಸ್ಟೆಂಟ್ ಟೌನ್ ಪ್ಲಾನರ್ ಮತ್ತು ಡ್ರಾಫ್ಟ್ಸ್‌ಮನ್ ಹುದ್ದೆಗಳು ಈ ನೇಮಕಾತಿ ವ್ಯಾಪ್ತಿಗೆ ಒಳಪಟ್ಟಿದ್ದು, ಅರ್ಹ ಮತ್ತು ಆಸಕ್ತ…
