SSLC: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಕೀ ಉತ್ತರ ಪ್ರಕಟ: ಆಕ್ಷೇಪಣೆ ಸಲ್ಲಿಕೆಗೆ ನಾಳೆ ಸಂಜೆವರೆಗಷ್ಟೇ ಅವಕಾಶ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ-2ರ ವಿಷಯವಾರು ಕರಡು ಕೀ ಉತ್ತರಗಳನ್ನು (Key Answers) ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ. ಈ ಕೀ ಉತ್ತರಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರು ಅಥವಾ ಶಿಕ್ಷಕರು ಯಾರಾದರೂ ಆಕ್ಷೇಪಣೆಗಳನ್ನು ಸಲ್ಲಿಸುವುದಿದ್ದರೆ, ಅದಕ್ಕೆ ನಾಳೆ ಕಡೆಯ ದಿನವಾಗಿದೆ ಎಂದು ಮಂಡಳಿ ತಿಳಿಸಿದೆ. ಆಕ್ಷೇಪಣೆ ಸಲ್ಲಿಸಲು ಅವಕಾಶ ಆಕ್ಷೇಪಣೆ ಸಲ್ಲಿಸಲು ಇಚ್ಛಿಸುವವರು ನಾಳೆ ಸಂಜೆ 5.30 ರ ಒಳಗಾಗಿ ಮಂಡಳಿಯ ಅಧಿಕೃತ ವೆಬ್‌ಸೈಟ್ ಮೂಲಕವೇ ತಮ್ಮ ಆಕ್ಷೇಪಣೆಗಳನ್ನು…
