Toxic: ‘ಟಾಕ್ಸಿಕ್’ ಟ್ರೈಲರ್ ಸಂಭ್ರಮ: ಬೆಂಗಳೂರಿಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ನಟಿ ಕಿಯಾರಾ ಅಡ್ವಾಣಿ
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ (Actor Yash) ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಚಿತ್ರದ ‘ತಬಾಹಿ’ ಹಾಡು ಸೃಷ್ಟಿಸಿರುವ ವಿವಾದ ಹಾಗೂ ಪರ-ವಿರೋಧದ ಚರ್ಚೆಗಳ ನಡುವೆಯೇ, ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಶನಿವಾರ ಬೆಳಿಗ್ಗೆ ಸಿಲಿಕಾನ್ ಸಿಟಿಯಲ್ಲಿ ಪ್ರತ್ಯಕ್ಷವಾಗಿದ್ದಾರೆ. ಇಂದು ಸಂಜೆ ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಚಿತ್ರದ ಭವ್ಯ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವರು ನಗರಕ್ಕೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಿಂದ ಹೊರಬಂದ ಕಿಯಾರಾ ಸಂಪೂರ್ಣ ಡೆನಿಮ್ ಉಡುಪಿನಲ್ಲಿ ಮಿಂಚುತ್ತಿದ್ದು, ಅಭಿಮಾನಿಗಳೊಂದಿಗೆ ಸೆಲ್ಫಿ ತೆಗೆದುಕೊಂಡು, ಮಾಧ್ಯಮದ ಕ್ಯಾಮೆರಾಗಳಿಗೆ ಪೋಸ್…
