KN Rajanna: ಸಚಿವರಿಗೆ ಶುರುವಾಗಿದೆ ಹೊಸ ಕಾಯಿಲೆ, ಖಾತೆ ಕ್ಯಾತೆಗೆ ಕೆ.ಎನ್. ರಾಜಣ್ಣ ವ್ಯಂಗ್ಯ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಕ್ಯಾಬಿನೆಟ್‌ನಲ್ಲಿ ಮೊದಲ ಹಂತದ ಇಲಾಖೆಗಳ ಹಂಚಿಕೆ ಪ್ರಕ್ರಿಯೆ ಮುಗಿಯುತ್ತಿದ್ದಂತೆಯೇ ಆಡಳಿತಾರೂಢ ಕಾಂಗ್ರೆಸ್ ಪಾಳಯದೊಳಗಿನ ಅಸಮಾಧಾನದ ಜ್ವಾಲೆಗಳು ಬಹಿರಂಗವಾಗಿ ಸ್ಫೋಟಗೊಳ್ಳಲಾರಂಭಿಸಿವೆ. ತಮಗೆ ಸಿಕ್ಕಿರುವ ಖಾತೆಗಳ ಬಗ್ಗೆ ಹಿರಿಯ ಸಚಿವರುಗಳು ಅಸಮಾಧಾನ ಹೊರಹಾಕುತ್ತಿರುವುದನ್ನು ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆ.ಎನ್. ರಾಜಣ್ಣ (KN Rajanna) ಅವರು ತಮ್ಮದೇ ವಿಶಿಷ್ಟ ಶೈಲಿಯಲ್ಲಿ ತೀವ್ರವಾಗಿ ಲೇವಡಿ ಮಾಡಿದ್ದಾರೆ. ಕೃಷ್ಣಬೈರೇಗೌಡರ ಹಠ; ಹೈಕಮಾಂಡ್ ಬಳಿ ದೂರು ಕೊಂಡೊಯ್ದ ಸಚಿವರು ಬೆಂಗಳೂರು ನಗರಾಭಿವೃದ್ಧಿ ಸಿಗಲಿಲ್ಲ…
