Kolar: ಡಾಂಬರು ಮತ್ತು ಸಿ.ಸಿ. ರಸ್ತೆ ಕಾಮಗಾರಿಗಳಿಗೆ ಚಾಲನೆ
ಕೋಲಾರ: ಶ್ರೀನಿವಾಸಪುರ (Kolar) ವಿಧಾನಸಭಾ ಕ್ಷೇತ್ರದ ಸುಗಟೂರು ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸುಮಾರು 2 ಕೋಟಿ ರೂಪಾಯಿ ವೆಚ್ಚದ ಡಾಂಬರು ಮತ್ತು ಸಿ.ಸಿ. ರಸ್ತೆ ಕಾಮಗಾರಿಗಳಿಗೆ ಸಂಸದ ಎಂ. ಮಲ್ಲೇಶ್ ಬಾಬು ಹಾಗೂ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಅವರು ಜಂಟಿಯಾಗಿ ಚಾಲನೆ ನೀಡಿದರು. ಕಾಮಗಾರಿ ಗುಣಮಟ್ಟದಲ್ಲಿ ರಾಜಿ ಇಲ್ಲ ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಮಲ್ಲೇಶ್ ಬಾಬು ಅವರು, ಗುತ್ತಿಗೆದಾರರು ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಡ್ಡಾಯವಾಗಿ ಕಾಪಾಡಬೇಕು ಮತ್ತು ನಿಗದಿತ ಅವಧಿಯೊಳಗೆ ಕೆಲಸವನ್ನು ಪೂರ್ಣಗೊಳಿಸಬೇಕು ಎಂದು ಕಟ್ಟುನಿಟ್ಟಿನ…
