Big News: ಲಷ್ಕರ್ ಕಮಾಂಡರ್ ಲತೀಫ್ ಭಟ್ ಪತ್ತೆಗೆ 15 ಲಕ್ಷ ರೂ. ನಗದು ಬಹುಮಾನ ಘೋಷಿಸಿದ ಜಮ್ಮು-ಕಾಶ್ಮೀರ ಪೊಲೀಸ್
ಜಮ್ಮು: ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಸರಣಿ ಹತ್ಯೆಗಳ ಹಿಂದೆ ಲಷ್ಕರ್-ಎ-ತೊಯ್ಬಾ (LeT) ಸಂಘಟನೆಯ ಕಮಾಂಡರ್ ಲತೀಫ್ ಭಟ್ (Big News) ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಈತನ ಬಂಧನಕ್ಕೆ ಕಾರಣವಾಗುವ ಸುಳಿವು ನೀಡಿದವರಿಗೆ 15 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಘೋಷಿಸಿದ್ದಾರೆ. ಈಗಾಗಲೇ ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರದ ಹಲವು ಜಿಲ್ಲೆಗಳು ಹಾಗೂ ಜಮ್ಮು ಪ್ರಾಂತ್ಯದ ವಿವಿಧ ಭಾಗಗಳಲ್ಲಿ ಲತೀಫ್ ಭಟ್‌ನ…
