Tamil Nadu: ಟಿವಿಕೆಗೆ ಮತ್ತೊಂದು ಶಾಕ್, ಶಾಸಕನಿಗೆ ಸದನದಲ್ಲಿ ಮತ ಹಾಕದಂತೆ ಹೈಕೋರ್ಟ್ ತಡೆ
ಚೆನ್ನೈ: ತಮಿಳುನಾಡು (Tamil Nadu) ರಾಜಕೀಯದಲ್ಲಿ ಭಾರಿ ಕುತೂಹಲ ಕೆರಳಿಸಿರುವ ವಿಶ್ವಾಸಮತ ಯಾಚನೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಮದ್ರಾಸ್ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಕೇವಲ ಒಂದು ಮತದ ಅಂತರದಿಂದ ಗೆಲುವು ಸಾಧಿಸಿದ್ದ ಟಿವಿಕೆ ಶಾಸಕ ಆರ್. ಶ್ರೀನಿವಾಸ ಸೇತುಪತಿ ಅವರು ವಿಧಾನಸಭೆಯಲ್ಲಿ ನಡೆಯಲಿರುವ ವಿಶ್ವಾಸಮತ ಯಾಚನೆಯಲ್ಲಿ ಪಾಲ್ಗೊಳ್ಳದಂತೆ ನ್ಯಾಯಾಲಯ ಮಂಗಳವಾರ (ಮೇ 12, 2026) ಮಧ್ಯಂತರ ತಡೆಯಾಜ್ಞೆ ನೀಡಿದೆ. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರ ಸೂಚನೆಯಂತೆ…
