Priyank Kharge: ಅಕ್ರಮ ವಲಸಿಗರ ವಿರುದ್ಧ ಸರ್ಕಾರದ ಬಿಗಿ ಕ್ರಮ: ಕಳೆದ 3 ತಿಂಗಳಲ್ಲಿ 1,000 ವಿದೇಶಿಗರ ಪತ್ತೆ, ಎಫ್‌ಆರ್‌ಒಗೆ ಹಸ್ತಾಂತರ!
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಕ್ರಮ ವಲಸಿಗರ ಪತ್ತೆ ಕಾರ್ಯಾಚರಣೆ ಹಾಗೂ ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೊಗಳ ಬಗ್ಗೆ ತಂತ್ರಜ್ಞಾನ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಮಹತ್ವದ ಹೇಳಿಕೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾಗಳಲ್ಲಿ ಸ್ವಯಂಘೋಷಿತ ತನಿಖೆ ನಡೆಸಿ, ವೀಡಿಯೊಗಳನ್ನು ಪೋಸ್ಟ್ ಮಾಡುವುದು ಮತ್ತು ಸರ್ಕಾರದ ವಿರುದ್ಧ ಸುಮ್ಮನೆ ಟೀಕೆ ಮಾಡುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಅವರು ಖಡಕ್ ಆಗಿ ಸೂಚಿಸಿದ್ದಾರೆ. ಇಂತಹ ಕಾನೂನು ಕೈಗೆತ್ತಿಕೊಳ್ಳುವ “ವಿಜಿಲಾಂಟಿಸಂ” ಅಥವಾ “ನೈತಿಕ ಪೊಲೀಸ್‌ಗಿರಿ” (ಮಾರಲ್…
