Mohan Das Pai: ಬೆಂಗಳೂರು ಅಭಿವೃದ್ಧಿಗೆ ಮೋಹನ್ ದಾಸ್ ಪೈ ಮಾಸ್ಟರ್ ಪ್ಲಾನ್: ಸಿಎಂ ಡಿ.ಕೆ. ಶಿವಕುಮಾರ್‌ಗೆ ಭ್ರಷ್ಟಾಚಾರ ರಹಿತ ಆಡಳಿತ ನೀಡಲು ವಿಶೇಷ ಸಲಹೆ!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಮೂಲಸೌಕರ್ಯಗಳ ದುಃಸ್ಥಿತಿ ಮತ್ತು ಆಡಳಿತ ವ್ಯವಸ್ಥೆಯಲ್ಲಿನ ಲೋಪಗಳ ವಿರುದ್ಧ ಖ್ಯಾತ ಉದ್ಯಮಿ ಮೋಹನ್ ದಾಸ್ ಪೈ (Mohan Das Pai) ಮತ್ತೊಮ್ಮೆ ಧ್ವನಿ ಎತ್ತಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮಗೆ ರಾಜಕೀಯ ಮಾರ್ಗದರ್ಶಕರಾಗಿರುವ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ ಮಾದರಿಯಲ್ಲೇ ಜನಪರ ಆಡಳಿತ ನೀಡಬೇಕು ಹಾಗೂ ಭ್ರಷ್ಟಾಚಾರಕ್ಕೆ ಸಂಪೂರ್ಣ ಬ್ರೇಕ್ ಹಾಕಿ ಜಾಗತಿಕ ಮಟ್ಟದಲ್ಲಿ ಬೆಂಗಳೂರಿನ ಘನತೆಯನ್ನು ಮರುಸ್ಥಾಪಿಸಬೇಕು ಎಂದು ಸಲಹೆ ನೀಡಿದ್ದಾರೆ. ಲೂಟಿ ಹೊಡೆಯುವ ರಾಜಕಾರಣದಿಂದಾಗಿ ನಗರದ…
