TOP NEWS
Supreme court about CJP protest and responsibilities

Supreme Court: ಪ್ರತಿಭಟನೆಯಲ್ಲಿ ಜವಾಬ್ದಾರಿ ನಿಗದಿಪಡಿಸದಿದ್ದರೆ ತನಿಖೆಗೆ ಬೆಲೆಯಿಲ್ಲ: ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಎಚ್ಚರಿಕೆ

ನವದೆಹಲಿ: ದೇಶಾದ್ಯಂತ ಸದ್ದು ಮಾಡಿದ್ದ ಪರೀಕ್ಷಾ ಅಕ್ರಮ ಮತ್ತು ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕಾಕ್‌ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆ ವೇಳೆ ಪೊಲೀಸರ ಅತಿಯಾದ ಬಲಪ್ರಯೋಗ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕಟ್ಟುನಿಟ್ಟಿನ ಕ್ರಮವಾಗಬೇಕು ಎಂದ ಸುಪ್ರೀಂ “ಪ್ರತಿಭಟನೆಯಲ್ಲಿ ಯಾರೇ ಅತಿಯಾಗಿ ನಡೆದುಕೊಂಡಿದ್ದರೂ, ಕಾನೂನು ಕೈಗೆತ್ತಿಕೊಂಡಿದ್ದರೂ ಅವರ ಮೇಲೆ ಕಟ್ಟುನಿಟ್ಟಿನ ಕ್ರಮವಾಗಬೇಕು. ತಪ್ಪಿತಸ್ಥರ ಜವಾಬ್ದಾರಿಯನ್ನು ನಿಗದಿಪಡಿಸದಿದ್ದರೆ ಅಂತಹ ತನಿಖೆಗೆ ಯಾವುದೇ…

Read More
NEET UG central education minister Dharmendra Pradhan resigns

NEET UG: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್ (NEET UG) ಪರೀಕ್ಷಾ ಅಕ್ರಮದ ವಿವಾದ ಕೊನೆಗೂ ತಾರ್ಕಿಕ ಅಂತ್ಯ ಕಂಡಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಹಾಗೂ ಸಚಿವರ ಪದತ್ಯಾಗಕ್ಕೆ ಆಗ್ರಹಿಸಿ ದೇಶದಾದ್ಯಂತ ತೀವ್ರ ಸ್ವರೂಪದ ಪ್ರತಿಭಟನೆಗಳು ನಡೆಯುತ್ತಿದ್ದ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ. ತಮ್ಮ ರಾಜೀನಾಮೆ ಪತ್ರವನ್ನು ಸಾಮಾಜಿಕ ಜಾಲತಾಣ ‘X’ ನಲ್ಲಿ ಹಂಚಿಕೊಂಡಿರುವ ಧರ್ಮೇಂದ್ರ ಪ್ರಧಾನ್ ಅವರು, ಈ…

Read More
Delhi Police Block Over 400 Pakistani Accounts Fuelling Fake NEET UG Protest Content

NEET UG: ನೀಟ್ ಆಂದೋಲನ ಹೆಸರಲ್ಲಿ ಪಾಕ್ ಸಂಚು: 400ಕ್ಕೂ ಹೆಚ್ಚು ಖಾತೆಗಳು ಬ್ಲಾಕ್!

ನವದೆಹಲಿ: ದೇಶಾದ್ಯಂತ ಭಾರಿ ವಿವಾದ ಸೃಷ್ಟಿಸಿರುವ ನೀಟ್ (NEET UG) ಪರೀಕ್ಷಾ ಅಕ್ರಮದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ನಡುವೆಯೇ, ದೆಹಲಿ ಪೊಲೀಸರು ಮಹತ್ತರ ಕಾರ್ಯಾಚರಣೆಯೊಂದನ್ನು ನಡೆಸಿದ್ದಾರೆ. ನೀಟ್ ಪರೀಕ್ಷಾ ಅಕ್ರಮದ ಪ್ರತಿಭಟನೆಗಳ ಹೆಸರಿನಲ್ಲಿ ಸುಳ್ಳು ಸುದ್ದಿ ಹಾಗೂ ದಾರಿ ತಪ್ಪಿಸುವ ಅಂಶಗಳನ್ನು ಹರಡುತ್ತಿದ್ದ ಪಾಕಿಸ್ತಾನ ಮೂಲದ ನೂರಾರು ಸಾಮಾಜಿಕ ಜಾಲತಾಣ ಖಾತೆಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಕೇಂದ್ರ ದೆಹಲಿ ವಿಭಾಗದ ಡಿಸಿಪಿ ರೋಹಿತ್ ರಾಜ್‌ಬೀರ್ ಸಿಂಗ್, ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ…

Read More
NEET Paper Leak Sadhu Kokila Urges Sandalwood to Drop Ego and Speak Up for Students

Sandalwood: ವಿದ್ಯಾರ್ಥಿಗಳ ಪರ ಹೋರಾಟಕ್ಕೆ ಸ್ಯಾಂಡಲ್‌ವುಡ್ ತಾರೆಯರ ಉದಾಸೀನತೆ: ಸಾಧುಕೋಕಿಲ ತೀವ್ರ ಆಕ್ರೋಶ

ಬೆಂಗಳೂರು: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET-UG) ಪರೀಕ್ಷಾ ಅಕ್ರಮದ ವಿರುದ್ಧದ ವಿದ್ಯಾರ್ಥಿಗಳ ಹೋರಾಟಕ್ಕೆ ಬಾಲಿವುಡ್ ಸೇರಿದಂತೆ ನೆರೆಯ ಕಾಲಿವುಡ್ ಚಿತ್ರರಂಗದ ಸ್ಟಾರ್‌ಗಳು ಬೀದಿಗಿಳಿದು ಸಾಥ್ ನೀಡಿದ್ದಾರೆ. ಆದರೆ, ಇದೇ ವಿಚಾರದಲ್ಲಿ ಕನ್ನಡ ಚಿತ್ರರಂಗದ (Sandalwood) ಬಹುತೇಕ ದೊಡ್ಡ ನಟರು ಹಾಗೂ ಗಣ್ಯರು ಮೌನಕ್ಕೆ ಶರಣಾಗಿರುವುದು ಈಗ ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಕನ್ನಡ ತಾರೆಯರ ಮೌನಕ್ಕೆ ಸಾಧುಕೋಕಿಲ ಕಿಡಿ: ಸ್ಯಾಂಡಲ್‌ವುಡ್ ಕಲಾವಿದರ ಈ ನಿಲುವಿನ ವಿರುದ್ಧ ಹಿರಿಯ ನಟ ಹಾಗೂ…

Read More
TVK Demands NEET Abolition Actor Vijays Party Launches Scathing Attack on Centre and DMK

TVK: ನೀಟ್ ಪರೀಕ್ಷೆ ರದ್ದತಿಗೆ ತಮಿಳುನಾಡಿನ ಟಿವಿ ಕೆ ಆಗ್ರಹ: ಕೇಂದ್ರ ಮತ್ತು ಡಿಎಂಕೆ ವಿರುದ್ಧ ನಟ ವಿಜಯ್ ಪಕ್ಷ ವಾಗ್ದಾಳಿ

ಚೆನ್ನೈ: ದೇಶಾದ್ಯಂತ ನೀಟ್ ಪರೀಕ್ಷಾ ಅಕ್ರಮ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆ ಕಾವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ, ತಮಿಳುನಾಡಿನ ಆಡಳಿತಾರೂಢ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ನೀಟ್ ವಿರುದ್ಧ ತನ್ನ ಹೋರಾಟವನ್ನು ತೀವ್ರಗೊಳಿಸಿದೆ. ನಟ, ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ನೇತೃತ್ವದ ಟಿವಿ ಕೆ ಪಕ್ಷವು ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ವಿರೋಧಿಸುವುದು ಮಾತ್ರವಲ್ಲದೆ, ಈ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಮಂಗಳವಾರ ಪಟ್ಟು ಹಿಡಿದಿದೆ. ಟಿವಿಕೆ ಹೇಳಿದ್ದೇನು? ದೆಹಲಿಯಲ್ಲಿ ನೀಟ್ ವಿರುದ್ಧ ವಿದ್ಯಾರ್ಥಿಗಳ…

Read More
NEET UG NTA guidelines for exam must follow

NEET: ಇಂದು ನೀಟ್‌ ಪರೀಕ್ಷೆ, ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟಿಸಿದ ಎನ್‌ಟಿಎ

ನವದೆಹಲಿ: ದೇಶಾದ್ಯಂತ ಇಂದು ನಡೆಯಲಿರುವ ‘ನೀಟ್ ಯುಜಿ 2026’ (NEET) ಮರುಪರೀಕ್ಷೆಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಸರ್ವಸನ್ನದ್ಧವಾಗಿದ್ದು, ಪರೀಕ್ಷಾರ್ಥಿಗಳಿಗೆ ಕೊನೆಯ ಕ್ಷಣದ ಮಹತ್ವದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಯಾವುದೇ ಸಮಸ್ಈಯೆಗಳು ಆಗಬಾರದು ಎನ್ನುವ ನಿಟ್ಟಿನಲ್ಲಿ ಪ್ರಮುಖ ಸಲಹೆಯನ್ನು ಹಂಚಿಕೊಂಡಿದ್ದ ಎನ್‌ಟಿಎ, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುವಾಗ ತಮ್ಮ ಅಡ್ಮಿಟ್ ಕಾರ್ಡ್ (ಪ್ರವೇಶ ಪತ್ರ), ಮಾನ್ಯತೆ ಇರುವ ಯಾವುದಾದರೂ ಒಂದು ಫೋಟೋ ಗುರುತಿನ ಚೀಟಿ ಹಾಗೂ ಎರಡು ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ ಫೋಟೋಗಳನ್ನು ಕಡ್ಡಾಯವಾಗಿ ತರಬೇಕು…

Read More
Crime NEET aspirant takes his life after

Crime: ನೀಟ್ ಮರುಪರೀಕ್ಷೆಗೆ ಮುನ್ನವೇ ಘೋರ ದುರಂತ: ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಘಾಜಿಯಾಬಾದ್: ದೇಶಾದ್ಯಂತ ಜೂನ್ 21ರಂದು ನೀಟ್ ಮರುಪರೀಕ್ಷೆ ನಡೆಯಲು ಇನ್ನು ಕೇವಲ ಎರಡೇ ದಿನ ಬಾಕಿ ಇರುವಾಗ ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ಅತ್ಯಂತ ಬೇಸರದ (Crime) ಘಟನೆಯೊಂದು ಸಂಭವಿಸಿದೆ. ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ 22 ವರ್ಷದ ವೈದ್ಯಕೀಯ ಆಕಾಂಕ್ಷಿ ಜತಿನ್ ಕುಮಾರ್ ಎಂಬ ಯುವಕ ಪ್ರತಾಪ್ ವಿಹಾರ್‌ನಲ್ಲಿರುವ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾವಿಗೂ ಮುನ್ನ ಆತ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿರುವ ಕೊನೆಯ ವಿಡಿಯೋ ಈಗ ಲಭ್ಯವಾಗಿದ್ದು, ಇಡೀ ಪ್ರಕರಣಕ್ಕೆ ಹೊಸ ತಿರುವು…

Read More