HD Kumaraswamy: ನೈಸ್ ಅಕ್ರಮ: ಫ್ರೀಡಂ ಪಾರ್ಕ್‌ನಲ್ಲಿ ಬಹಿರಂಗ ಚರ್ಚೆಗೆ ಬನ್ನಿ – ಕಾಂಗ್ರೆಸ್‌ಗೆ ಕುಮಾರಸ್ವಾಮಿ ನೇರ ಸವಾಲು
ಬೆಂಗಳೂರು: “ಬಿಡದಿ ಟೌನ್‌ಶಿಪ್ ಹಾಗೂ ನೈಸ್ ಯೋಜನೆಗಳ ನೈಜ ಪಿತಾಮಹರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮತ್ತು ನಾನು ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ನೇರ ಸವಾಲು ಹಾಕುತ್ತಿದ್ದೇನೆ. ಧೈರ್ಯವಿದ್ದರೆ ಫ್ರೀಡಂ ಪಾರ್ಕ್‌ನಲ್ಲೇ ಒಂದು ಬಹಿರಂಗ ಚರ್ಚಾ ವೇದಿಕೆ ಸಿದ್ಧಪಡಿಸಿ, ನಿಮ್ಮ ಹಾಲಿ-ಮಾಜಿ ಶಾಸಕರೆಲ್ಲರೂ ಒಟ್ಟಾಗಿ ಬನ್ನಿ. ನಿಮ್ಮೆಲ್ಲರ ಆರೋಪಗಳನ್ನು ನಾನು ಏಕಾಂಗಿಯಾಗಿಯೇ ಎದುರಿಸಲು ಸಿದ್ಧನಿದ್ದೇನೆ” ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಪ್ರಬಲ ಸವಾಲೆಸೆದಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಕಡು ವಾಗ್ದಾಳಿ ಬೆಂಗಳೂರಿನ…
