Nitin Nabin: ನಿತಿನ್ ನಬಿನ್ ಅವರನ್ನು ಅಧ್ಯಕ್ಷರಾಗಿ ಅಧಿಕೃತ ಘೋಷಣೆ ಮಾಡಿದ ಬಿಜೆಪಿ
ನವದೆಹಲಿ: ಇಂದು ದೆಹಲಿಯಲ್ಲಿನ ಭಾರತೀಯ ಜನತ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪಕ್ಷದ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನಿತಿನ್ ನಬಿನ್ (Nitin Nabin) ಅವರನ್ನು ಔಪಚಾರಿಕವಾಗಿ ಘೋಷಣೆ ಮಾಡಲಾಗಿದೆ. ಅಧ್ಯಕ್ಷ ಹುದ್ದೆ ಅಲಂಕರಿಸಿದ ಕಿರಿಯ ವ್ಯಕ್ತಿ ಈ ಕಾರ್ಯಕ್ರಮದಲ್ಲಿ ಬಿಜೆಪಿ ಸಾಂಸ್ಥಿಕ ಚುನಾವಣೆಯ ಚುನಾವಣಾಧಿಕಾರಿ ಕೆ. ಲಕ್ಷ್ಮಣ್ ಅವರು ಸಾಂಸ್ಥಿಕ ಚುನಾವಣೆಯ ಫಲಿತಾಂಶಗಳನ್ನು ಘೋಷಣೆ ಮಾಡಿದ್ದು, ಮತ್ತು ಪಕ್ಷದ ಉನ್ನತ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ವ್ಯಕ್ತಿ 45 ವರ್ಷದ ನಿತಿನ್ ನಬಿನ್ ಅವರಿಗೆ ಚುನಾವಣಾ ಪ್ರಮಾಣಪತ್ರವನ್ನು ಹಸ್ತಾಂತರಿಸಿದ್ದಾರೆ….
