Supreme Court: ಸುಪ್ರೀಂ ಕೋರ್ಟ್ನಲ್ಲಿ ಹಿಂದಿ ಭಾಷೆ ಜಾರಿಗೆ ಆಯೋಗ ರಚನೆ ಕೋರಿದ್ದ ಅರ್ಜಿ ವಜಾ
ನವದೆಹಲಿ: ದೇಶದ ಸರ್ವೋಚ್ಚ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ನಲ್ಲಿ (Supreme Court) ಹಿಂದಿಯನ್ನು ಅಧಿಕೃತ ಭಾಷೆಯಾಗಿ ಬಳಸುವ ಕುರಿತು ಪರಿಶೀಲಿಸಿ ಶಿಫಾರಸು ಮಾಡಲು ಪ್ರತ್ಯೇಕ ಆಯೋಗವನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ಸ್ಪಷ್ಟವಾಗಿ ನಿರಾಕರಿಸಿದೆ. ಭಾಷೆಗೆ ಸಂಬಂಧಿಸಿದ ಸುಧಾರಣೆಗಳನ್ನು ಈಗಾಗಲೇ ಆಡಳಿತಾತ್ಮಕ ಮಟ್ಟದಲ್ಲಿ ಹಂತ ಹಂತವಾಗಿ ಜಾರಿಗೆ ತರಲಾಗುತ್ತಿದ್ದು, ಇಂತಹ ಪ್ರಕ್ರಿಯೆಗಳನ್ನು ನ್ಯಾಯಾಂಗ ಆದೇಶಗಳ ಮೂಲಕ ಬಲವಂತವಾಗಿ ಜಾರಿಗೆ ತರಲು ಸಾಧ್ಯವಿಲ್ಲ…
