PM Kisan: ಪಿಎಂ ಕಿಸಾನ್ ಸಮ್ಮಾನ್ 22 ಕಂತಿನ ಹಣ ಬಿಡುಗಡೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಗುವಾಹಟಿಯಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ (PM Kisan) ನಿಧಿಯ 22ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದರು. 18,640 ಕೋಟಿ ಬಿಡುಗಡೆ ಒಟ್ಟು 18,640 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದ್ದು, ತಲಾ 2 ಸಾವಿರ ರೂಪಾಯಿಯಂತೆ ದೇಶದ ಸುಮಾರು 9.32 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ (DBT) ಮೂಲಕ ಹಣ ಜಮೆಯಾಗಿದೆ. ಈ ಯೋಜನೆಯಡಿ ಇದುವರೆಗೆ ರೈತರಿಗೆ ಒಟ್ಟು 4.09 ಲಕ್ಷ ಕೋಟಿ ರೂಪಾಯಿಗಳಿಗೂ ಹೆಚ್ಚಿನ…
