Big News: ನಿವೃತ್ತಿಗೆ 6 ತಿಂಗಳು ಬಾಕಿ ಇರುವಾಗಲೇ ವಿಆರ್ಎಸ್ಗೆ ಅರ್ಜಿ: ಹಿರಿಯ ಐಪಿಎಸ್ ಅಧಿಕಾರಿ ಎಸ್. ರವಿ ನಿರ್ಧಾರದಿಂದ ಸಂಚಲನ!
ಬೆಂಗಳೂರು: ಕರ್ನಾಟಕದ ಆಡಳಿತ ಮತ್ತು ಪೊಲೀಸ್ ವಲಯದಲ್ಲಿ ತೀವ್ರ ಕುತೂಹಲ ಹಾಗೂ ಚರ್ಚೆಗೆ ಗ್ರಾಸವಾಗುವಂತಹ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ದಕ್ಷ ಹಾಗೂ ಹಿರಿಯ ಐಪಿಎಸ್ ಅಧಿಕಾರಿಯಾಗಿ ಗುರುತಿಸಿಕೊಂಡಿರುವ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ (ಕೆಎಸ್ಆರ್ಪಿ) ಎಡಿಜಿಪಿ ಎಸ್. ರವಿ ಅವರು (Big News) ತಮ್ಮ ಹುದ್ದೆಗೆ ಸ್ವಯಂ ನಿವೃತ್ತಿ (ವಿಆರ್ಎಸ್) ಕೋರಿ ದಿಢೀರ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ನಿವೃತ್ತಿಗೆ ಕೆಲವೇ ತಿಂಗಳುಗಳು ಬಾಕಿ ಇರುವ ಈ ಸಂದರ್ಭದಲ್ಲಿ ಹಿರಿಯ ಅಧಿಕಾರಿಯೊಬ್ಬರು ಅನಿರೀಕ್ಷಿತವಾಗಿ ರಾಜೀನಾಮೆ ನೀಡಿರುವುದು ಪೊಲೀಸ್…
