Pawan Kalyan: ಪವರ್ ಸ್ಟಾರ್ ‘ಒಜಿ’ ಸಿನಿಮಾಗೆ ಪೂಜಾ ಹೆಗ್ಡೆ ಎಂಟ್ರಿ?: ಸಖತ್ ಹೈಪ್ ಸೃಷ್ಟಿಸಿದ ‘ಒಜಿ ಯುನಿವರ್ಸ್’
ಹೈದರಾಬಾದ್: ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ (Pawan Kalyan) ನಟನೆಯ ಬಹುನಿರೀಕ್ಷಿತ ‘ಒಜಿ’ (OG) ಸಿನಿಮಾ ಮತ್ತು ಅದರ ಫ್ರಾಂಚೈಸಿ ಕುರಿತು ಸಿನಿರಂಗದಲ್ಲಿ ದೊಡ್ಡ ಮಟ್ಟದ ಚರ್ಚೆಗಳು ಶುರುವಾಗಿವೆ. ಸದ್ಯ ಗಾಂಧಿನಗರದಲ್ಲಿ ಹರಿದಾಡುತ್ತಿರುವ ಗಾಸಿಪ್‌ಗಳ ಪ್ರಕಾರ, ಈ ಆ್ಯಕ್ಷನ್ ಡ್ರಾಮಾ ಸಿನಿಮಾದ ಎರಡನೇ ಭಾಗದಲ್ಲಿ ನಾಯಕಿಯಾಗಿ ನಟಿಸಲು ಸ್ಟಾರ್ ನಟಿ ಪೂಜಾ ಹೆಗ್ಡೆ ಅವರ ಹೆಸರನ್ನು ಪರಿಶೀಲಿಸಲಾಗುತ್ತಿದೆ ಎನ್ನಲಾಗಿದೆ. ಈ ಕುರಿತು ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬೀಳದಿದ್ದರೂ, ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ಭಾರಿ…
