Renukaswamy Case: ರೇಣುಕಾಸ್ವಾಮಿ ಕೊಲೆ ಕೇಸ್: 3ನೇ ದಿನವೂ ನ್ಯಾಯಾಲಯದಲ್ಲಿ ಮಾಫಿ ಸಾಕ್ಷಿ ಪ್ರದೋಷ್ ಮಹತ್ವದ ಹೇಳಿಕೆ!
ಬೆಂಗಳೂರು: ಬೆಚ್ಚಿಬೀಳಿಸಿದ್ದ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದ ತನಿಖೆಯಲ್ಲಿ ಅತ್ಯಂತ ಪ್ರಮುಖ ಮೈಲಿಗಲ್ಲಾಗಬಹುದಾದ ಮಾಫಿ ಸಾಕ್ಷಿ (Approver) ಪ್ರದೋಷ್ ರಾವ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆಯು ಸತತ ಮೂರನೇ ದಿನವೂ ಮುಂದುವರಿದಿದೆ. ಬೆಂಗಳೂರಿನ 59ನೇ ಸಿಸಿಎಚ್ (CCH) ನ್ಯಾಯಾಲಯದಲ್ಲಿ ನ್ಯಾಯಾಧೀಶರ ನೇರ ಸಮ್ಮುಖದಲ್ಲಿ ಪ್ರದೋಷ್ ತಮ್ಮ ಸುದೀರ್ಘ ಹೇಳಿಕೆಯನ್ನು ನೀಡುತ್ತಿದ್ದು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಹಲವು ಸ್ಫೋಟಕ ಹಾಗೂ ರಹಸ್ಯ ಮಾಹಿತಿಗಳು ಈಗ ಒಂದೊಂದಾಗಿ ಹೊರಬರುತ್ತಿವೆ. ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದ ಪ್ರದೋಷ್ ನ್ಯಾಯಾಲಯದ ಮುಂದೆ…
