Ramayana: ರಾವಣನ ಗಂಭೀರ ಧ್ವನಿಯ ಹಿಂದಿನ ರಹಸ್ಯ ಬಯಲು: ಸ್ಪಷನೆ ಕೊಟ್ಟ ಪ್ರಜ್ವಲ್ ದೇವರಾಜ್
ಬೆಂಗಳೂರು: ಬಾಲಿವುಡ್‌ನ ಬಹುನಿರೀಕ್ಷಿತ ‘ರಾಮಾಯಣ’ (Ramayana) ಸಿನಿಮಾದ ಟ್ರೇಲರ್‌ನಲ್ಲಿದ್ದ ರಾವಣನ ಪಾತ್ರದ ಧ್ವನಿ ಯಾರದ್ದು ಎಂಬ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ನಡೆಯುತ್ತಿತ್ತು. ಟ್ರೇಲರ್‌ನಲ್ಲಿ ರಾವಣನ ಪಾತ್ರಕ್ಕೆ ಧ್ವನಿ ನೀಡಿರುವುದು ರಾಕಿಂಗ್ ಸ್ಟಾರ್ ಯಶ್ ಅಲ್ಲ, ಬದಲಿಗೆ ಸ್ಯಾಂಡಲ್‌ವುಡ್‌ನ ಖ್ಯಾತ ಹಿರಿಯ ನಟ ದೇವರಾಜ್ ಅವರು ಎಂಬ ವದಂತಿಗಳು ವ್ಯಾಪಕವಾಗಿ ಹರಿದಾಡುತ್ತಿದ್ದವು. ಇದೀಗ ಈ ಎಲ್ಲಾ ಊಹಾಪೋಹಗಳಿಗೆ ನಟ ಪ್ರಜ್ವಲ್ ದೇವರಾಜ್ ಸ್ಪಷ್ಟನೆ ನೀಡುವ ಮೂಲಕ ಪೂರ್ಣವಿರಾಮ ಇಟ್ಟಿದ್ದಾರೆ. ಯಶ್ ಜೊತೆ ಮಾತನಾಡಿದ್ದ ಪ್ರಜ್ವಲ್ ರೇವಣ್ಣ…
