Prajwal Revanna: ಜೈಲಿನಲ್ಲಿ ಮೊಬೈಲ್ ಬಳಕೆ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಪ್ರಜ್ವಲ್ ರೇವಣ್ಣ
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಹೊಸ ಸಂಕಷ್ಟ ಎದುರಾಗಿದೆ. ಜೈಲಿನ ಬ್ಯಾರಕ್ ಒಳಗೆ ಅನಧಿಕೃತವಾಗಿ ಮೊಬೈಲ್ ಫೋನ್ ಬಳಕೆ ಮಾಡುತ್ತಿದ್ದ ಗಂಭೀರ ಆರೋಪದ ಮೇಲೆ ಅವರ ವಿರುದ್ಧ ಹೊಸದಾಗಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸರು ಇವರನ್ನು ಎರಡು ದಿನಗಳ ಕಾಲ ತಮ್ಮ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ. ಮಹತ್ವದ ವಿಚಾರಗಳನ್ನ ಬಹಿರಂಗಪಡಿಸಿದ ಪ್ರಜ್ವಲ್ ರೇವಣ್ಣ…
