KSRTC: ಸರ್ಕಾರ ವಿರುದ್ಧ ಸಾರಿಗೆ ನೌಕರರ ಸಮರ: ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಕ್ಟೋಬರ್ 7ರಂದು ಬೃಹತ್ ಪ್ರತಿಭಟನೆ!
ಬೆಂಗಳೂರು: ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರ ಸುದೀರ್ಘ ದಿನಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ಹಾಗೂ ಇಲಾಖೆಯ ಅಧಿಕಾರಿಗಳು ವಿಫಲರಾಗಿದ್ದಾರೆ (KSRTC) ಎಂದು ಆರೋಪಿಸಿ ಸಾರಿಗೆ ನೌಕರರ ಒಕ್ಕೂಟ ಮತ್ತು ಜಂಟಿ ಕ್ರಿಯಾ ಸಮಿತಿ ಮತ್ತೆ ಸಮರ ಸಾರಿದೆ. ನೌಕರರ ಹಕ್ಕುಗಳಿಗಾಗಿ ಸತತವಾಗಿ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ, ಮುಂಬರುವ ಅಕ್ಟೋಬರ್ 7ರಂದು ರಾಜ್ಯಾದ್ಯಂತ ಬೃಹತ್ ಮಟ್ಟದ ಪ್ರತಿಭಟನಾ ಧರಣಿ ನಡೆಸಲು ನೌಕರರ ಸಂಘಟನೆಗಳು ನಿರ್ಧರಿಸಿವೆ. ಬಾಕಿ ಹಣ ಬಿಡುಗಡೆ ಮಾಡಲು ಆಗ್ರಹ…
