TOP NEWS
R Ashok Targets Congress Government After Own MLA Alleges 7 percent Cut Money in KRIDL

R Ashok: KRIDL‌ನಲ್ಲಿ ಕಮಿಷನ್ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮಿಷನ್ ಮತ್ತು ಭ್ರಷ್ಟಾಚಾರದ ಆರೋಪಗಳು ಜೋರಾಗಿದ್ದು, ಈ ಬಾರಿ ಸ್ವಪಕ್ಷೀಯ ಶಾಸಕರೇ ನೀಡಿರುವ ಲಿಖಿತ ದೂರು ಪ್ರತಿಪಕ್ಷಗಳಿಗೆ ಹೊಸ ಅಸ್ತ್ರವಾಗಿ ಸಿಕ್ಕಿದೆ. ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಸ್. ಅಶೋಕ್ ಕುಮಾರ್ ರೈ ಅವರು ಮಂಗಳೂರಿನ ಕೆಆರ್‌ಐಡಿಎಲ್ (KRIDL) ವಿಭಾಗದಲ್ಲಿ ನಡೆಯುತ್ತಿರುವ ಕಮಿಷನ್ ದಂಧೆಯ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದನ್ನು ಉಲ್ಲೇಖಿಸಿ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್ (R Ashok) ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ…

Read More
Hanur Firing Incident Opposition Leader R Ashoka Alleges Fake Encounter Demands Judicial Inquiry

R Ashok: ಹನೂರು ಅರಣ್ಯ ಇಲಾಖೆ ಫೈರಿಂಗ್ ಪ್ರಕರಣ: ನ್ಯಾಯಾಂಗ ತನಿಖೆಗೆ ಆರ್‌‌ ಅಶೋಕ್ ಪಟ್ಟು!

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅರಣ್ಯ ಪ್ರದೇಶದಲ್ಲಿ ಇಲಾಖೆಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಗೆ ಮೂವರು ಸಾವನ್ನಪ್ಪಿರುವ ಭೀಕರ ಘಟನೆಯನ್ನು ಖಂಡಿಸಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌‌. ಅಶೋಕ್, ( R Ashok) ಪ್ರಕರಣದ ಸತ್ಯಾಸತ್ಯತೆ ಹೊರಬರಲು ತಕ್ಷಣವೇ ‘ನ್ಯಾಯಾಂಗ ತನಿಖೆ’ಗೆ ಆದೇಶಿಸಬೇಕೆಂದು ಒತ್ತಾಯಿಸಿದ್ದಾರೆ. ಘಟನೆ ಕುರಿತು ಸರ್ಕಾರದ ನಾಯಕರ ಹೇಳಿಕೆಗಳಲ್ಲಿ ಯಾವುದೇ ಪರಸ್ಪರ ಸಾಮ್ಯತೆಯಿಲ್ಲ ಎಂದು ಟೀಕಿಸಿದ ಅಶೋಕ್, ಅರಣ್ಯ ಇಲಾಖೆ ಅಧಿಕಾರಿಗಳು ಒಂದು ಕಥೆ ಹೇಳಿದರೆ, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಉಸ್ತುವಾರಿ…

Read More
R ashok slams government over shivajnagar incident

R Ashok: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಆರ್‌ ಅಶೋಕ್

ಬೆಂಗಳೂರು: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜಿಬಿಎ (GBA) ಅಧಿಕಾರಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಅತ್ಯಂತ ಖಂಡನೀಯ. ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಅಧಿಕಾರಿಯ ಮೇಲೆಯೇ ಈ ರೀತಿಯ ಹಲ್ಲೆ ನಡೆಯುವುದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂಬುದಕ್ಕೆ ಜೀವಂತ ಸಾಕ್ಷಿಯಾಗಿದೆ ಎಂದು ಬಿಜೆಪಿ ನಾಯಕ ಆರ್‌ ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದ್ದಾರೆ, ಕೃಷ್ಣ ಬೈರೇಗೌಡ  ಅವರೇ, ಈಗ ನಿಮ್ಮ ಮೌನ ಏಕೆ? ಬೆಂಗಳೂರಿನ ಬೇರೆ ಭಾಗಗಳಲ್ಲಿ ಒತ್ತುವರಿ ತೆರವು ವೇಳೆ…

Read More
National Security at Risk R Ashok Demands Immediate Halt to Congress SIR Process

R Ashok: ಎಸ್‌ಐಆರ್ ಪ್ರಕ್ರಿಯೆಯನ್ನು ಕಾಂಗ್ರೆಸ್ ಹೈಜಾಕ್ ಮಾಡುತ್ತಿದೆ: ಪ್ರತಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ

ಚಾಮರಾಜನಗರ: ಶಾಶ್ವತ ನಿವಾಸಿ ಪ್ರಮಾಣಪತ್ರದ ಮೂಲಕ ಎಸ್‌ಐರ್‌ ಪ್ರಕ್ರಿಯೆಯನ್ನೇ ಕಾಂಗ್ರೆಸ್‌ ಹೈಜಾಕ್‌ ಮಾಡುತ್ತಿದೆ. ಇದರಿಂದ ದೇಶದ ಭದ್ರತೆಗೆ ಧಕ್ಕೆಯಾಗಿದ್ದು, ಕೂಡಲೇ ಈ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashok) ಆಗ್ರಹಿಸಿದರು. ಅಲ್ಪಸಂಖ್ಯಾತರನ್ನ ಓಲೈಸಲು ಯತ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್‌ ಪ್ರಕ್ರಿಯೆಯ ಮೂಲಕ ಭಾರತೀಯರಿಗೆ ಮಾತ್ರ ಮತದಾನದ ಹಕ್ಕನ್ನು ನೀಡಲಾಗುತ್ತಿದೆ. ಆದರೆ ಕಾಂಗ್ರೆಸ್‌ ಸರ್ಕಾರ ಎಸ್‌ಐಆರ್‌ ಪ್ರಕ್ರಿಯೆಯನ್ನು ಹೈಜಾಕ್‌ ಮಾಡುತ್ತಿದೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದ ನಂತರ ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡಲಾಗುತ್ತಿದೆ….

Read More
R ashok demands SIT for gruha lakshmi scam to government

R Ashok: ಗೃಹಲಕ್ಷ್ಮಿ ಯೋಜನೆಯಲ್ಲಿ 225 ಕೋಟಿ ರೂ. ಗೋಲ್‌ಮಾಲ್‌, ಎಸ್‌ಐಟಿ ತನಿಖೆ ಮಾಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ 225 ಕೋಟಿ ರೂ. ಸರ್ಕಾರಿ ಪ್ರಾಯೋಜಿತ ಲೂಟಿ ನಡೆದಿದ್ದು, ಇದರ ಹಿಂದೆ ಅಧಿಕಾರಿಗಳು ಹಾಗೂ ರಾಜಕಾರಣಿಗಳ ಗ್ಯಾಂಗ್‌ ಇದೆ. ಈ ಅಕ್ರಮದ ವಿರುದ್ಧ ತನಿಖೆ ಮಾಡಲು ಕೂಡಲೇ ಎಸ್‌ಐಟಿ ರಚಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashok) ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 225 ಕೋಟಿ ರೂ. ಅಕ್ರಮ ಆಗಿದೆ ಎಂದು ಸಿಎಜಿ ವರದಿಯಲ್ಲಿ ಹೇಳಿದ್ದರೂ ಯಾವುದೇ ಕ್ರಮ ವಹಿಸಿಲ್ಲ. ನಕಲಿ ಖಾತೆಗಳಿಗೆ ಹಣ ಸಂದಾಯವಾಗಿದ್ದು, ಅಧಿಕಾರಿ ಹಾಗೂ ರಾಜಕಾರಣಿಗಳ ದೊಡ್ಡ ಗ್ಯಾಂಗ್‌…

Read More
R Ashok and BY Vijayendra went to regarding cross voting BJP

BJP: ಅಡ್ಡ ಮತದಾನದ ತನಿಖೆ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್‌ನಿಂದ ತುರ್ತು ಬುಲಾವ್! ದೆಹಲಿಗೆ ದೌಡಾಯಿಸಿದ ವಿಜಯೇಂದ್ರ, ಆರ್‌. ಅಶೋಕ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಸಂಭವಿಸಿದ ಅಡ್ಡ ಮತದಾನದ (Cross Voting) ಆಘಾತಕಾರಿ ಬೆಳವಣಿಗೆಯು ಕರ್ನಾಟಕ ಬಿಜೆಪಿಯಲ್ಲಿ (BJP) ತಲ್ಲಣ ಸೃಷ್ಟಿಸಿದ್ದು, ಈ ಬೆನ್ನಲ್ಲೇ ಹೈಕಮಾಂಡ್‌ನಿಂದ ತುರ್ತು ಕರೆ ಬಂದ ಹಿನ್ನೆಲೆಯಲ್ಲಿ ರಾಜ್ಯ ಪ್ರಮುಖ ನಾಯಕರು ದೆಹಲಿಗೆ ಧಾವಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ಮುಂಜಾನೆಯೇ ರಾಷ್ಟ್ರ ರಾಜಧಾನಿ ತಲುಪಿದ್ದರೆ, ಅವರ ಹಿಂದೆಯೇ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಕೂಡ ದೆಹಲಿ ವಿಮಾನವೇರಿದ್ದಾರೆ. ವರಿಷ್ಠರ ಮುಂದೆ ನಾಯಕರ ಅಗ್ನಿಪರೀಕ್ಷೆ ಪಕ್ಷದ ಶಾಸಕರಿಂದಲೇ…

Read More
R ashok slams government for created problem for nEET students

R Ashok: ಸಮಾವೇಶದ ಟ್ರಾಫಿಕ್ ಕಿರಿಕಿರಿಗೆ ನೀಟ್ ಅಭ್ಯರ್ಥಿಗಳು ಕಣ್ಣೀರು; ಸರ್ಕಾರದ ವಿರುದ್ಧ ಆರ್. ಅಶೋಕ್ ತೀವ್ರ ಆಕ್ರೋಶ

ಬೆಂಗಳೂರು: ರಾಜಧಾನಿಯಲ್ಲಿ ಭಾನುವಾರ ನಡೆದ ನೀಟ್ (NEET) ಮರುಪರೀಕ್ಷೆಯ ವೇಳೆ ಸೃಷ್ಟಿಯಾದ ಭಾರಿ ಸಂಚಾರ ದಟ್ಟಣೆಯಿಂದಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಾಗದೆ ವಂಚಿತರಾದ ಘಟನೆಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅತ್ಯಂತ ಪ್ರಮುಖವಾದ ಪರೀಕ್ಷೆ ಇರುವ ದಿನವೇ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಬೃಹತ್ ರಾಜಕೀಯ ಸಮಾವೇಶ ಹಮ್ಮಿಕೊಂಡಿದ್ದರಿಂದಲೇ ಇಡೀ ನಗರದ ರಸ್ತೆಗಳು ಬ್ಲಾಕ್ ಆಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಡಲಾಗಿದೆ…

Read More