Ram Gopal Varma: ಶಿಕ್ಷಣ ಪದ್ಧತಿಯನ್ನು ಹೂತು ಹಾಕಿ”: ಎಐ ಅಬ್ಬರದ ನಡುವೆ ರಾಮ್ ಗೋಪಾಲ್ ವರ್ಮಾ ವಿವಾದಾತ್ಮಕ ಪೋಸ್ಟ್!
ಮುಂಬೈ: ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ನೀಟ್ ಪರೀಕ್ಷಾ ಅಕ್ರಮ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬೆನ್ನಲ್ಲೇ, ವಿವಾದಾತ್ಮಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Varma) ವೈದ್ಯಕೀಯ ಶಿಕ್ಷಣದ ಭವಿಷ್ಯದ ಕುರಿತು ಹಂಚಿಕೊಂಡಿರುವ ಸುದೀರ್ಘ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಅಂದರೆ ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನದ ಅಬ್ಬರ ಜೋರಾಗಿರುವ ಈ ಕಾಲದಲ್ಲಿ, ಇನ್ನು ಮುಂದೆ ಸಾಂಪ್ರದಾಯಿಕ ವೈದ್ಯಕೀಯ ಕೋರ್ಸ್‌ಗಳ ಅಗತ್ಯವೇನಿದೆ ಎಂದು ಪ್ರಶ್ನಿಸಿರುವ…
