Ram Mandir: ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣಕ್ಕೆ ಆರ್‌ಎಸ್‌ಎಸ್ ತೀವ್ರ ಬೇಸರ; ನಿಷ್ಪಕ್ಷಪಾತ ತನಿಖೆಗೆ ದತ್ತಾತ್ರೇಯ ಹೊಸಬಾಳೆ ಆಗ್ರಹ!
ನವದೆಹಲಿ: ಅಯೋಧ್ಯೆಯ ರಾಮ ಮಂದಿರಕ್ಕೆ (Ram Mandir) ಬಂದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಹಗರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಒತ್ತಾಯಿಸಿದೆ. ಇಂತಹ ಘಟನೆಗಳು ಭವಿಷ್ಯದಲ್ಲಿ ಮರುಕಳಿಸದಂತೆ ತಪ್ಪಿಸಲು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದು ಅತ್ಯಗತ್ಯ ಎಂದು ಶುಕ್ರವಾರ ಹೇಳಿಕೆ ನೀಡಿರುವ ಆರ್‌ಎಸ್‌ಎಸ್, ಈ ವಂಚನೆಯಿಂದಾಗಿ ರಾಮಭಕ್ತರ ಮನಸ್ಸಿಗೆ ತೀವ್ರ ‘ನೋವು’ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದೆ. ಹೇಳಿಕೆ ಬಿಡುಗಡೆ ಮಾಡಿದ ಆರ್‌ಎಸ್‌ಎಸ್ ವಿಡಿಯೋ ಹೇಳಿಕೆಯೊಂದನ್ನು…
