Congress: ಬಸವಣ್ಣ, ಗಾಂಧೀಜಿ ಅವಹೇಳನ ಆರೋಪ: ರವಿ ಹಂಜ್, ಅಡ್ಡಾಂಡ ಕಾರ್ಯಪ್ಪ ಗಡಿಪಾರಿಗೆ ಆಗ್ರಹ
ಬೆಂಗಳೂರು: ವಿಶ್ವಗುರು ಬಸವಣ್ಣ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ವಿರುದ್ಧ (Congress) ಅವಹೇಳನಕಾರಿ ಹೇಳಿಕೆಗಳನ್ನು ನೀಡಿ ರಾಷ್ಟ್ರೀಯ ಮೌಲ್ಯಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಆರೋಪಿಸಿ, ರವಿ ಹಂಜ್ ಮತ್ತು ಅಡ್ಡಾಂಡ ಕಾರ್ಯಪ್ಪ ಅವರನ್ನು ತಕ್ಷಣ ಗಡಿಪಾರು ಮಾಡುವಂತೆ ಒತ್ತಾಯಿಸಿ ನಗರದಲ್ಲಿ ಪ್ರತಿಭಟನೆ ನಡೆಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಾಲ್ಗೊಂಡು ತೀವ್ರ ಆಕ್ರೋಶ ಹೊರಹಾಕಿದರು. ಕಾಂಗ್ರೆಸ್ ಭವನದ ಎದುರು ಪ್ರತಿಭಟನಾಕಾರರ…
