TOP NEWS
Horrific Accident on Chennai Bengaluru Expressway Car Hits Divider and Flips 4 Killed

Road Mishap: ರಾಜ್ಯದಲ್ಲಿ ಭೀಕರ ರಸ್ತೆ ದುರಂತಗಳು: ಕೋಲಾರ, ರಾಯಚೂರಿನಲ್ಲಿ ಪ್ರತ್ಯೇಕ ಅಪಘಾತ, ಆರು ಮಂದಿ ದುರ್ಮರಣ!

ಕೋಲಾರ/ರಾಯಚೂರು: ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಗಳಲ್ಲಿ ಒಟ್ಟು ಆರು ಮಂದಿ ದಾರುಣವಾಗಿ ಪ್ರಾಣ ಕಳೆದುಕೊಂಡಿದ್ದು, ಹಲವರು ತೀವ್ರವಾಗಿ (Road Mishap) ಗಾಯಗೊಂಡಿದ್ದಾರೆ. ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಸರಣಿ ಅಪಘಾತಗಳ ಪೈಕಿ ಕೋಲಾರ ಜಿಲ್ಲೆಯ ಮರಗಲ್ ಬಳಿ ಸಂಭವಿಸಿದ ಭೀಕರ ರಸ್ತೆ ದುರಂತದಲ್ಲಿ ಕಾರು ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ರಾಯಚೂರು ಜಿಲ್ಲೆಯಲ್ಲಿ ನಡೆದ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಷ್ಟಕ್ಕೂ ಆಗಿದ್ದೇನು? ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ…

Read More
Tragedy on Duty SI Killed as Speeding Scooter Hits Him During Ganesh Immersion

Road Mishap: ಸ್ಕೂಟರ್‌ ಡಿಕ್ಕಿಯಾಗಿ ಕರ್ತವ್ಯನಿರತ ಎಸ್‌ಐ ಸಾವು!

ಹೈದರಾಬಾದ್: ಗಣೇಶ ವಿಸರ್ಜನೆಗೆ ಬಂದೋಬಸ್ತ್ ನಿಯೋಜನೆಗೊಂಡಿದ್ದ ಕರ್ತವ್ಯನಿರತ ಸಬ್‌ಇನ್ಸ್‌ಪೆಕ್ಟರ್ ಒಬ್ಬರು ವೇಗವಾಗಿ ಬಂದ ಸ್ಕೂಟರ್ ಢಿಕ್ಕಿಯಾಗಿ ದಾರುಣವಾಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ತೆಲಂಗಾಣದ ರಾಜಧಾನಿ ಹೈದರಾಬಾದ್‌ನ ಟ್ಯಾಂಕ್ ಬಂಡ್ (Road Mishap) ಪ್ರದೇಶದಲ್ಲಿ ನಡೆದಿದೆ. ಘಟನೆಯ ಭೀಕರ ದೃಶ್ಯಗಳು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಪಘಾತದ ತೀವ್ರತೆಗೆ ಪೊಲೀಸ್ ಅಧಿಕಾರಿ ಸ್ಥಳದಲ್ಲೇ ತೀವ್ರ ರಕ್ತಸ್ರಾವದಿಂದ ಕುಸಿದುಬಿದ್ದಿದ್ದರು. ಇಷ್ಟಕ್ಕೂ ಆಗಿದ್ದೇನು? ಮೃತರನ್ನು ಖಮ್ಮಂ ಜಿಲ್ಲೆಯ ಕೊತ್ತಗೂಡೆಂ ಟೌನ್-೨ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ೫೫ ವರ್ಷದ ಕೆ. ವೆಂಕಣ್ಣ ಎಂದು…

Read More
Tragedy Near Mandya High Speed Collision Claims Life of Bengaluru Woman on Highway

Road Mishap: ಮಂಡ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಅತಿವೇಗದ ಕಾರು ಡಿಕ್ಕಿಯಾಗಿ ಬೆಂಗಳೂರಿನ ಮಹಿಳೆ ಸ್ಥಳದಲ್ಲೇ ಸಾವು

ಮಂಡ್ಯ: ಜಿಲ್ಲೆಯ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತಾವರೇಕೆರೆ ಗೇಟ್ ಸಮೀಪದ ಪೆಟ್ರೋಲ್ ಬಂಕ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, (Road Mishap) ಮಹಿಳೆಯೊಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಘಟನೆಯಲ್ಲಿ ಮತ್ತೋರ್ವ ಪೆಟ್ರೋಲ್ ಬಂಕ್ ಮಾಲೀಕ ಸೇರಿದಂತೆ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಬೆಂಗಳೂರು ನಿವಾಸಿಯಾದ ಗುಜರಾತ್ ಮೂಲದ ಸುಧಾ ಜೈನ್ (58) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಏನಿದು ಘಟನೆ? ಶ್ರವಣಬೆಳಗೊಳದ ಧಾರ್ಮಿಕ ಕ್ಷೇತ್ರದ ದರ್ಶನ ಮುಗಿಸಿ ಕುಟುಂಬ ಸಮೇತ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಈ ಕರುಳು…

Read More
Tragedy in Hassan Bank Cash Van Crashes with KSRTC Bus Near Maranahalli One Killed Four Hospitalized

Road Mishap: ಎಟಿಎಂ ಕ್ಯಾಶ್ ವಾಹನ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ರಸ್ತೆ ಅಪಘಾತ, ನಾಲ್ವರಿಗೆ ಗಂಭೀರ ಗಾಯ

ಹಾಸನ: ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Road Mishap) ಬೊಲೆರೋ ಪಿಕಪ್‌ನಲ್ಲಿದ್ದ ದಿನೇಶ್ (38) ಎಂಬುವರು ಘಟನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ವಾಹನದಲ್ಲಿದ್ದ ಸುಬ್ರಮಣ್ಯ, ವೆಂಕಟರಮಣ, ಜಿತೇಂದ್ರ ಮತ್ತು ದುರ್ಗಾಪ್ರಸಾದ್ ಎಂಬ ನಾಲ್ವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಘಟನೆಯ ವಿವರ: ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಂಗಳೂರಿನಿಂದ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಎಟಿಎಂಗಳಿಗೆ ಹಣ ತಲುಪಿಸಲು…

Read More
Horrific Road mishap in Gadag Tipper Truck Mows Down Bike Two Dead on the Spot

Road Mishap: ಲಾರಿ-ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ಇಬ್ಬರು ಸವಾರರ ದುರ್ಮ*ರಣ!

ಗದಗ: ಮಣ್ಣು ತುಂಬಿಕೊಂಡು ವೇಗವಾಗಿ ಬಂದ ಟಿಪ್ಪರ್ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಇಟಗಿ (Road Mishap) ಕ್ರಾಸ್ ಸಮೀಪ ಮಂಗಳವಾರ ನಡೆದಿದೆ. ಏನಿದು ಪ್ರಕರಣ? ರೋಣ ತಾಲೂಕಿನ ಹೊಸಳ್ಳಿ ಗ್ರಾಮದ ನಿವಾಸಿಗಳಾದ ಶರಣಪ್ಪ ಜಾಲಿಹಾಳ (65) ಹಾಗೂ ಸುರೇಶ ತಳವಾರ (59) ಮೃತಪಟ್ಟ ದುರ್ದೈವಿಗಳು. ಇಬ್ಬರೂ ಇಟಗಿಯಿಂದ ತಮ್ಮ ಸ್ವಗ್ರಾಮ ಹೊಸಳ್ಳಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ರೋಣ ಭಾಗದಿಂದ…

Read More
Davanagere road mishap Speeding Container Truck Rams Stopped Car at Toll Gate Miraculous Escape for Passengers

Road Mishap: ದಾವಣಗೆರೆ ಟೋಲ್ ಪ್ಲಾಜಾದಲ್ಲಿ ಭೀಕರ ಅಪಘಾತ: ಕಾರಿಗೆ ಡಿಕ್ಕಿ ಹೊಡೆದ ಕಂಟೇನರ್ ಟ್ರಕ್

ದಾವಣಗೆರೆ: ಜಿಲ್ಲೆಯ ದಾವಣಗೆರೆ ತಾಲೂಕಿನ ಟೋಲ್ ಪ್ಲಾಜಾವೊಂದರಲ್ಲಿ ಭೀಕರ ಜಾಗರೂಕತೆಯ ಕೊರತೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಟೋಲ್ ಶುಲ್ಕ ಪಾವತಿಸಲು ಸಾಲಿನಲ್ಲಿ ನಿಂತಿದ್ದ ಕಾರಿಗೆ ವೇಗವಾಗಿ ಬಂದ ಕಂಟೇನರ್ ಟ್ರಕ್ ಹಿಂಬದಿಯಿಂದ ಭೀಕರವಾಗಿ ಡಿಕ್ಕಿ (Road Mishap) ಹೊಡೆದಿದೆ. ಆಗಿದ್ದೇನು? ಅತಿಯಾದ ವೇಗದಲ್ಲಿದ್ದ ಕಂಟೇನರ್ ಲಾರಿ ನಿಯಂತ್ರಣ ಸಿಗದೆ ಕಾರಿಗೆ ಗುದ್ದಿದ ರಭಸಕ್ಕೆ ಕಾರು ಮುಂಭಾಗಕ್ಕೆ ನುಗ್ಗಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ…

Read More
Himachal Pradesh Road Mishap 8 Killed 10 Critically Injured as Private Bus Flips Over

Road Mishap: ಹಿಮಾಚಲ ಪ್ರದೇಶದಲ್ಲಿ ರಸ್ತೆ ಅಪಘಾತ: ಖಾಸಗಿ ಬಸ್ ಉರುಳಿ ಬಿದ್ದು 8 ಮಂದಿ ದುರ್ಮರಣ, 10 ಜನರಿಗೆ ಗಂಭೀರ ಗಾಯ!

ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ (Road Mishap) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಾಲಕ ಮತ್ತು ನಿರ್ವಾಹಕ ಸೇರಿದಂತೆ ಎಂಟು ಜನರು ಮೃತಪಟ್ಟಿದ್ದು, 10 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಪ್ರಯಾಣಿಕರಿದ್ದ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಕೆಳಗಿನ ರಸ್ತೆಗೆ ಮಗುಚಿ ಬಿದ್ದಿದ್ದರಿಂದ ಈ ದುರಂತ ಸಂಭವಿಸಿದೆ. ಒಟ್ಟು 18 ಜನರಿದ್ದ ಬಸ್ ಬೈರಾಗಢದಿಂದ ಚಂಬಾಗೆ ತೆರಳುತ್ತಿದ್ದ ‘ಶರ್ಮಾ ಬಸ್ ಸರ್ವಿಸ್’ಗೆ ಸೇರಿದ ಬಸ್, ಬೆಳಿಗ್ಗೆ ಸುಮಾರು 6:30ಕ್ಕೆ ಹೊರಟಿತ್ತು. ಸುಮಾರು ಮೂರು…

Read More