Road Mishap: ಕಾಶ್ಮೀರದಲ್ಲಿ ರಸ್ತೆ ಅಪಘಾತ, 39 ಮಂದಿಗೆ ಗಾಯ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದೇರ್‌ಬಲ್ ಜಿಲ್ಲೆಯ ಕಾಂಗನ್ ಪ್ರದೇಶದಲ್ಲಿ ಮಂಗಳವಾರ ತೀವ್ರ ರಸ್ತೆ (Road Mishap) ಅಪಘಾತ ಸಂಭವಿಸಿದ್ದು, ಅಮರನಾಥ ಯಾತ್ರೆಯಿಂದ ಹಿಂತಿರುಗುತ್ತಿದ್ದ ಕನಿಷ್ಠ 39 ಯಾತ್ರಿಕರು ಗಾಯಗೊಂಡಿದ್ದಾರೆ. ರಸ್ತೆಯ ಮಳೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಅತಿವೇಗದ ಬಸ್ಸು, ರಸ್ತೆಯಿಂದ ಪಕ್ಕಕ್ಕೆ ಜಾರಿ ಹರಿಗಾನ್ವಾನ್ ಪ್ರದೇಶದಲ್ಲಿದ್ದ ಮನೆಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಮನೆ ಸಂಪೂರ್ಣ ಜಖಂಗೊಂಡಿದೆಯಾದರೂ, ಬಸ್ಸು ಪಕ್ಕದಲ್ಲೇ ಹರಿಯುತ್ತಿದ್ದ ಸಿಂಧ್ ನದಿಗೆ ಉರುಳಿ ಬೀಳುವುದನ್ನು ಈ ಮನೆ ತಡೆದಿದೆ. ಅಪಘಾತದ ಸಮಯದಲ್ಲಿ…
