TOP NEWS
Lokayukta raid on bengaluru RTO office and haveri sand mining handle

Lokayukta: ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ: ಬೆಂಗಳೂರು ದಕ್ಷಿಣ ಆರ್‌ಟಿಒ ಅಧಿಕಾರಿಗಳಿಗೆ ಕ್ಲಾಸ್; ಹಾವೇರಿಯಲ್ಲಿ ಅಕ್ರಮ ಮರಳು ದಂಧೆಕೋರರು ಉಡೀಸ್!

ರಾಮನಗರ: ರಾಜ್ಯದಲ್ಲಿ ಭ್ರಷ್ಟಾಚಾರ ಮತ್ತು ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಸಾರ್ವಜನಿಕರಿಂದ ಸಾಲು ಸಾಲು ದೂರುಗಳು ಬಂದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಪ್ರಾದೇಶಿಕ ಸಾರಿಗೆ (RTO) ಕಚೇರಿ ಮೇಲೆ ಲೋಕಾಯುಕ್ತ ಎಸ್ಪಿ ಪಿ.ವಿ.ಸ್ನೇಹಾ ಅವರ ನೇತೃತ್ವದಲ್ಲಿ ಮಿಂಚಿನ (Lokayukta) ದಾಳಿ ನಡೆದಿದೆ. ಕಚೇರಿಯ ಇಂಚಿಂಚೂ ಪರಿಶೀಲನೆ ನಡೆಸಿದ ಅಧಿಕಾರಿಗಳು, ಅಲ್ಲಿನ ಅವ್ಯವಸ್ಥೆ ಕಂಡು ಕಂಗಾಲಾಗಿದ್ದಾರೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಈ ಕಚೇರಿ ಮೇಲೆ ನಡೆದಿರುವ ಮೂರನೇ ದಾಳಿ…

Read More