Asaduddin Owaisi: ‘ಪಾರ್ಟಿ ಹೆಸರನ್ನು ‘ಸಮಾಜವಾದಿ ಯಾದವ್ ಪರಿವಾರ್’ ಅಂತ ಬದಲಾಯಿಸಿ!’: ಅಖಿಲೇಶ್ ಯಾದವ್ ವಿರುದ್ಧ ಓವೈಸಿ ವಾಗ್ದಾಳಿ!
ಉತ್ತರ ಪ್ರದೇಶ: 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ರಾಜಕೀಯ ನಾಯಕರ ನಡುವಿನ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ. ಎಐಎಂಐಎಂ (AIMIM) ಅಧ್ಯಕ್ಷ ಅಸಾದುದ್ದೀನ್ ಓವೈಸಿ (Asaduddin Owaisi ) ಅವರು ಸಮಾಜವಾದಿ ಪಾರ್ಟಿ (SP) ಮತ್ತು ಅದರ ಅಧ್ಯಕ್ಷ ಅಖಿಲೇಶ್ ಯಾದವ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಪಕ್ಷದಲ್ಲಿ ಮುಸ್ಲಿಂ ನಾಯಕರಿಗೆ ಸರಿಯಾದ ಪ್ರಾತಿನಿಧ್ಯ ನೀಡುತ್ತಿಲ್ಲ ಎಂದು ಸರಣಿ ಆರೋಪಗಳನ್ನು ಮಾಡಿದ್ದಾರೆ. ಉತ್ತರ ಪ್ರದೇಶದ ಕೈರಾನಾ ಜಿಲ್ಲೆಯಲ್ಲಿ ರವಿವಾರ ನಡೆದ ಬೃಹತ್ ರ‍್ಯಾಲಿಯನ್ನು ಉದ್ದೇಶಿಸಿ…
