Sanjay Dutt: ಕೆಡಿ ಸಿನಿಮಾ ಹಾಡಿನ ವಿವಾದ, ಕ್ಷಮೆ ಕೇಳಿದ ಸಂಜತ್ ದತ್
ನವದೆಹಲಿ: ಕನ್ನಡದ ಪ್ಯಾನ್ ಇಂಡಿಯಾ ಚಿತ್ರ ‘ಕೆಡಿ: ದಿ ಡೆವಿಲ್’ನ ‘ಸರ್ಕೆ ಚುನರ್ ತೇರಿ ಸರ್ಕೆ’ ಹಾಡಿನಲ್ಲಿ ಮಹಿಳೆಯರನ್ನು ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಮತ್ತು ಅಶ್ಲೀಲ ಸಾಹಿತ್ಯವಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಉಂಟಾಗಿದ್ದ ವಿವಾದಕ್ಕೆ ಸಂಬಂಧಿಸಿದಂತೆ, ನಟ ಸಂಜಯ್ ದತ್ (Sanjay Dutt) ಅವರು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (NCW) ಲಿಖಿತ ಕ್ಷಮಾಪಣೆ ಸಲ್ಲಿಸಿದ್ದಾರೆ. ಈ ಹಾಡು ಬಿಡುಗಡೆಯಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಮಹಿಳೆಯರ ಅಸಭ್ಯ ಚಿತ್ರಣವಿದೆ ಎಂದು ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ, ಆಯೋಗವು…
