Sanjay Raut: ಅಯೋಧ್ಯೆ ರಾಮಮಂದಿರಕ್ಕೆ ನೀಡಿದ್ದ 4 ಕೆಜಿ ಬೆಳ್ಳಿ ಇಟ್ಟಿಗೆ ನಾಪತ್ತೆ? ಸಂಜಯ್ ರಾವುತ್ ಗಂಭೀರ ಆರೋಪ!
ನವದೆಹಲಿ: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ತಮ್ಮ ಪಕ್ಷದ ವತಿಯಿಂದ ದೇಣಿಗೆಯಾಗಿ ನೀಡಲಾಗಿದ್ದ 4 ಕೆಜಿ ತೂಕದ ಬೆಳ್ಳಿಯ ಇಟ್ಟಿಗೆಯು ನಾಪತ್ತೆಯಾಗಿದೆ ಎಂದು ಶಿವಸೇನೆ (UBT) ಸಂಸದ ಸಂಜಯ್ ರಾವುತ್ (Sanjay Raut) ಶುಕ್ರವಾರ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಿಂದ ಸೂಕ್ತ ಜವಾಬ್ದಾರಿ ಮತ್ತು ಸಮಗ್ರ ತನಿಖೆಯಾಗಬೇಕು ಎಂದು ಅವರು ತೀವ್ರವಾಗಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ (X) ನಲ್ಲಿ ಪೋಸ್ಟ್ ಮಾಡಿರುವ ಸಂಜಯ್ ರಾವುತ್,…
