Santosh Lad: ಹಿಂದೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಬರ ಪರಿಹಾರ ಪಡೆದಿದ್ದೆವು: ಕೇಂದ್ರದ ಧೋರಣೆಗೆ ಸಚಿವ ಸಂತೋಷ್ ಲಾಡ್ ಕಿಡಿ
ಬೆಂಗಳೂರು: ರಾಜ್ಯವು ತೀವ್ರ ಬರಗಾಲದಂತಹ ಪ್ರಕೃತಿ ವಿಕೋಪಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ, ಸಂಕಷ್ಟದಲ್ಲಿರುವ ರೈತ ಸಮುದಾಯ ಹಾಗೂ ಸಾರ್ವಜನಿಕರಿಗೆ ತುರ್ತಾಗಿ ಆರ್ಥಿಕ ನೆರವು ಒದಗಿಸುವುದು ಕೇಂದ್ರ ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಅಭಿಪ್ರಾಯಪಟ್ಟಿದ್ದಾರೆ. ಆದರೆ, ಕರ್ನಾಟಕಕ್ಕೆ ನ್ಯಾಯಯುತವಾಗಿ ಸಿಗಬೇಕಾದ ಬರ ಪರಿಹಾರದ ಅನುದಾನವನ್ನು ಬಿಡುಗಡೆ ಮಾಡುವಲ್ಲಿ ಕೇಂದ್ರ ಸರ್ಕಾರವು ತೋರುತ್ತಿರುವ ವಿಳಂಬ ಧೋರಣೆಯ ಕುರಿತು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಸರ್ಕಾರ…
