Seemanth Kumar: ಅಶಿಸ್ತು ತೋರಿದರೆ ಪೊಲೀಸ್ ಸಿಬ್ಬಂದಿ ವಜಾ: ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಖಡಕ್ ವಾರ್ನಿಂಗ್!
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಅಶಿಸ್ತು ತೋರುವ ಯಾವುದೇ ದರ್ಜೆಯ ಅಧಿಕಾರಿ ಅಥವಾ ಸಿಬ್ಬಂದಿಯನ್ನು ಮುಲಾಜಿಲ್ಲದೆ ಸೇವೆಯಿಂದ ವಜಾ ಮಾಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ (Seemanth Kumar) ಖಡಕ್ ಎಚ್ಚರಿಕೆ ನೀಡಿದ್ದಾರೆ. ಆಡುಗೋಡಿಯ ಸಿಎಆರ್ ದಕ್ಷಿಣ ಕವಾಯಿತು ಮೈದಾನದಲ್ಲಿ ನಡೆದ ಮಾಸಿಕ ಪರೇಡ್ ವೀಕ್ಷಿಸಿ ಅವರು ಮಾತನಾಡಿದರು. ಶಿಸ್ತು ಉಲ್ಲಂಘಿಸಿದರೆ ಕಠಿಣ ಕ್ರಮ ಕರ್ತವ್ಯ ಲೋಪ ಎಸಗುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಅಮಾನತು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಅಶಿಸ್ತು ಪ್ರದರ್ಶಿಸಿದ ಕೆಲವರ ವಿರುದ್ಧ ಕಠಿಣ…
