KPSC: KPSC ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಿವಾಸದ ಮೇಲೆ ಇಡಿ ದಿಢೀರ್ ದಾಳಿ!
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ಬೆಂಗಳೂರಿನ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಮಂಗಳವಾರ ದಿಢೀರ್ ದಾಳಿ ನಡೆಸಿ ವ್ಯಾಪಕ ಶೋಧ ಕಾರ್ಯ ನಡೆಸಿದ್ದಾರೆ. ಸಂಶಯಾಸ್ಪದ ದಾಖಲೆಗಳನ್ನು ಸಾಲು ಸಾಲಾಗಿ ಪರಿಶೀಲನೆ ರಾಜಧಾನಿಯ ಸಂಜಯನಗರದ ವ್ಯಾಪ್ತಿಯಲ್ಲಿರುವ ಪ್ರತಿಷ್ಠಿತ ಡಾಲರ್ಸ್ ಕಾಲೋನಿಯಲ್ಲಿರುವ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸಕ್ಕೆ ಬೆಳಗಿನ…
