TOP NEWS
ECI Directs Special Voter Registration Drive Across Karnataka After Final SIR List Publication

SIR: ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಔಟ್: ಅಕ್ಟೋಬರ್ 27ರ ಬಳಿಕ ರಾಜ್ಯದಲ್ಲಿ ಬೃಹತ್ ವಿಶೇಷ ನೋಂದಣಿ ಅಭಿಯಾನ!

ಬೆಂಗಳೂರು: ರಾಜ್ಯದಲ್ಲಿ ತೀವ್ರ ಕುತೂಹಲ ಹಾಗೂ ರಾಜಕೀಯ ರಾದ್ಧಾಂತಕ್ಕೆ ಕಾರಣವಾಗಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ನಡುವೆಯೇ ಭಾರತ ಚುನಾವಣಾ ಆಯೋಗ (ECI) ಅತ್ಯಂತ ಪ್ರಮುಖ ನಿರ್ಧಾರವೊಂದನ್ನು ಕೈಗೊಂಡಿದೆ. ಎಸ್‌ಐಆರ್ ಪ್ರಕ್ರಿಯೆ ನಡೆಯುತ್ತಿರುವ ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳಿಗೆ (CEO) ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡ ತಕ್ಷಣವೇ ಬೃಹತ್ ಮಟ್ಟದ ‘ವಿಶೇಷ ಮತದಾರರ ನೋಂದಣಿ ಅಭಿಯಾನ’ ಹಮ್ಮಿಕೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಂಡು, ಅಕ್ಟೋಬರ್ 27ರಂದು…

Read Full News
Voter Count Surges in Karnataka State EC Announces Revised Roll of 4 49 Crore

SIR: ರಾಜ್ಯದಲ್ಲಿ 4.49 ಕೋಟಿಗೆ ಏರಿಕೆಯಾದ ಒಟ್ಟು ಮತದಾರರ ಸಂಖ್ಯೆ: ಆಯೋಗದಿಂದ ಅಧಿಕೃತ ಅಂಕಿ-ಅಂಶ ಪ್ರಕಟ!

ಬೆಂಗಳೂರು: ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಮತ್ತು ಪರಿಶೀಲನಾ ಪ್ರಕ್ರಿಯೆಯ ನಂತರ ರಾಜ್ಯದ ಒಟ್ಟು ಮತದಾರರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದ (SIR) ಏರಿಕೆ ಕಂಡುಬಂದಿದೆ. ಪ್ರಸ್ತುತ ರಾಜ್ಯದಲ್ಲಿ ಒಟ್ಟು ಮತದಾರರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಬೃಹತ್ 4,49,81,740 (4.49 ಕೋಟಿ) ಗಡಿ ತಲುಪಿದೆ ಎಂದು ರಾಜ್ಯ ಚುನಾವಣಾ ಆಯೋಗವು ತನ್ನ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ. ಸೆಪ್ಟೆಂಬರ್ 25ರವರೆಗಿನ ವರದಿಯಂತೆ ರಾಜ್ಯದಲ್ಲಿ ಒಟ್ಟು 4,48,44,080 ಮತದಾರರಿದ್ದರು. ಆದರೆ ತದನಂತರ ನಡೆದ ನೋಟಿಸ್ ಜಾರಿ, ಪರಿಶೀಲನೆ…

Read Full News
Protecting Every Citizen Voting Right Is Our Government Resolve DK Shivakumar

DK Shivakumar: ಮತದಾರರ ಪಟ್ಟಿ ಅಕ್ರಮ ತಡೆಗೆ ಸಿಎಂ ಪಟ್ಟು: ಚುನಾವಣಾ ಆಯೋಗಕ್ಕೆ ಸುದೀರ್ಘ ದೂರು ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (SIR) ಅವಧಿಯಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳನ್ನು ಬಲವಂತವಾಗಿ ಮತ್ತು ಅಕ್ರಮವಾಗಿ ಮತದಾರರ ಪಟ್ಟಿಯಿಂದ ಕೈಬಿಡಲು ಬೃಹತ್ ಮಟ್ಟದ ಷಡ್ಯಂತ್ರ ನಡೆದಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಅಧಿಕೃತ ಪತ್ರ ಬರೆದು ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ. ಪ್ರತಿಯೊಬ್ಬ ಅರ್ಹ ಮತದಾರನ ಹಕ್ಕನ್ನು ಎತ್ತಿಹಿಡಿಯುವುದು ಹಾಗೂ ಯಾವುದೇ ಧರ್ಮ, ಜಾತಿ, ಸಮುದಾಯ ಅಥವಾ ಸಾಮಾಜಿಕ ಹಿನ್ನೆಲೆಯ ಜನರನ್ನು ಪಟ್ಟಿಯಿಂದ ವಂಚಿಸದಂತೆ ತಡೆಯುವುದು ಸರ್ಕಾರದ…

Read Full News
Form 7 Misuse and Fake Applications DK Shivakumar Gears Up to Protest at Election Office

DK Shivakumar: ಫಾರಂ-7 ದುರ್ಬಳಕೆ ನಡೆಸಿ ಬೋಗಸ್ ಅರ್ಜಿ ಸಲ್ಲಿಕೆ: ಚುನಾವಣಾ ಆಯೋಗದ ಕಚೇರಿಯಲ್ಲಿ ಡಿಕೆಶಿ ಧರಣಿಗೆ ಸಜ್ಜು

ಬೆಂಗಳೂರು: “ಪೂರ್ವಮುದ್ರಿತ ಮತದಾರರ ವಿವರಗಳನ್ನು ಒಳಗೊಂಡ ಫಾರಂ -7 ಮೂಲಕ ರಾಜ್ಯದ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ (ಡಿಲೀಟ್) ಷ್ಯಡ್ಯಂತ್ರ ಮಾಡಿರುವವರ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲಿಸಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಆಗ್ರಹಿಸಿದರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ನಡೆಸಿ ಗುರುವಾರ ಮಾತನಾಡಿದರು. “ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಬಿಜೆಪಿ ಹಾಗೂ…

Read Full News
BJP JDS Plotting to Delete 50 60 Lakh Voters DK Shivakumar Shocking Allegation

DK Shivakumar: 50-60 ಲಕ್ಷ ಮತದಾರರ ಹೆಸರು ಡಿಲೀಟ್ ಮಾಡಲು ಬಿಜೆಪಿ-ಜೆಡಿಎಸ್ ಷಡ್ಯಂತ್ರ: ಡಿಕೆ ಶಿವಕುಮಾರ್ ಗಂಭೀರ ಆರೋಪ

ಬೆಂಗಳೂರು: ರಾಜ್ಯದಲ್ಲಿ ಸುಮಾರು 50 ರಿಂದ 60 ಲಕ್ಷ ಮತದಾರರ ಹೆಸರುಗಳನ್ನು ಏಕಾಏಕಿ ಪಟ್ಟಿಯಿಂದ ಕೈಬಿಡಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಗಂಭೀರ ಷಡ್ಯಂತ್ರ ಹೆಣೆದಿದ್ದಾರೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬೃಹತ್ ಅಕ್ರಮವನ್ನು ತಡೆಯಲು ಮತ್ತು ಮತದಾರರ ಹಕ್ಕನ್ನು ರಕ್ಷಿಸಲು ಸೂಕ್ತ ತನಿಖೆಯಾಗುವವರೆಗೂ ತಾವು ಚುನಾವಣಾ ಆಯೋಗದ ಕಚೇರಿಯಿಂದ ಹೊರಬರುವುದಿಲ್ಲ ಎಂದು ಪಟ್ಟು ಹಿಡಿದು ಧರಣಿ ಕುಳಿತಿದ್ದಾರೆ. ದಾಖಲೆ…

Read Full News
Friction Within Election Commission CEC Gyanesh Kumar Faces Legal Challenge in Top Court

Gyanesh Kumar: ಚುನಾವಣಾ ಆಯೋಗದಲ್ಲಿ ಆಂತರಿಕ ಭಿನ್ನಾಭಿಪ್ರಾಯ: ಸಿಇಸಿ ಜ್ಞಾನೇಶ್ ಕುಮಾರ್ ನಿರ್ಧಾರಗಳಿಗೆ ಸುಪ್ರೀಂ ಸವಾಲು

ನವದೆಹಲಿ: ಚುನಾವಣಾ ಆಯೋಗವು ಇತ್ತೀಚೆಗೆ ಕೈಗೊಂಡ ಮತದಾರರ ಪಟ್ಟಿಯ ವಿಶೇಷ ಸಂಸೋಧನೆ ಮತ್ತು ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಇದೀಗ ದೊಡ್ಡ ಪ್ರಮಾಣದ ಕಾನೂನು ವಿವಾದಕ್ಕೆ ಸಿಲುಕಿದೆ. ಶಾಸನಬದ್ಧ ಕರ್ತವ್ಯಗಳನ್ನು ಉಲ್ಲಂಘಿಸಿ, ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿ ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (Gyanesh Kumar) ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಾಗಿದೆ. ಸಂವಿಧಾನದ ವಿಧಿ 32ರ ಅಡಿಯಲ್ಲಿ ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಅವರು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದು, ಮುಖ್ಯ ಚುನಾವಣೆ…

Read Full News
Voter Roll Revision Flaws Names of Prominent Figures Including DK Shivakumars Mother and Tech Founders Flagged

SIR: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪ: ಸಿಎಂ ಡಿ.ಕೆ. ಶಿವಕುಮಾರ್ ತಾಯಿಗೆ ನೋಟೀಸ್

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಪ್ರಮುಖ ರಾಜಕೀಯ ನಾಯಕರು ಹಾಗೂ ಉದ್ಯಮಿಗಳ ಕುಟುಂಬಸ್ಥರ ಹೆಸರುಗಳು ಲೋಪದೋಷಗಳ ಪಟ್ಟಿಯಲ್ಲಿ ಸೇರ್ಪಡೆಗೊಂಡಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ತಾಯಿ ಗೌರಮ್ಮ ಸೇರಿದಂತೆ ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ಕುಟುಂಬ ಮತ್ತು ಜೆರೋಧಾ ಸಂಸ್ಥಾಪಕರಾದ ನಿತಿನ್ ಕಾಮತ್ ಹಾಗೂ ನಿಖಿಲ್ ಕಾಮತ್ ಕುಟುಂಬದವರ ಹೆಸರುಗಳು ಈ ಪಟ್ಟಿಯಲ್ಲಿ ಕಾಣಿಸಿಕೊಂಡಿವೆ. ಡಿಕೆಶಿ ತಾಯಿ ಹೆಸರಲ್ಲಿ ವ್ಯತ್ಯಾಸ ಕನಕಪುರ ವಿಧಾನಸಭಾ ಕ್ಷೇತ್ರದಿಂದ ಮತದಾರರ ಪಟ್ಟಿಯಲ್ಲಿ ಹೆಸರು…

Read Full News