Soujanya Case: ಸೌಜನ್ಯ ಕೊಲೆ ಪ್ರಕರಣ: ಎಸ್‌ಐಟಿಗೆ ಮುಚ್ಚಿದ ಲಕೋಟೆ ನೀಡಿದ ಹೋರಾಟಗಾರ ಜಯಂತ್ ಟಿ, ತನಿಖೆಗೆ ಹೊಸ ತಿರುವು!
ಮಂಗಳೂರು: ಕರ್ನಾಟಕ ರಾಜ್ಯದಾದ್ಯಂತ ಅಪಾರ ಚರ್ಚೆಗೆ ಗ್ರಾಸವಾಗಿರುವ, ಕೋಟ್ಯಂತರ ಜನರ ಮನಸ್ಸಿನಲ್ಲಿ ನೋವು ಹಾಗೆಯೇ ಉಳಿದಿರುವ ಸೌಜನ್ಯ (Soujanya Case) ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದೆ. ಈ ಕುರಿತು ಮರುತನಿಖೆ ಕೈಗೊಂಡಿರುವ ವಿಶೇಷ ತನಿಖಾ ತಂಡವು (SIT) ತನ್ನ ತನಿಖೆಯ ವೇಗವನ್ನು ಹೆಚ್ಚಿಸಿದ್ದು, ಮಂಗಳೂರಿನಲ್ಲಿ ಕಾರ್ಯಾಚರಣೆ ಚುರುಕುಗೊಳಿಸಿದೆ. ಇದರ ಬೆನ್ನಲ್ಲೇ ಪ್ರಕರಣದ ತನಿಖೆಗೆ ಹೊಸ ದಿಕ್ಕು ತೋರಿಸುವಂತ ಘಟನೆಯೊಂದು ನಡೆದಿದ್ದು, ಸಾಮಾಜಿಕ ಹೋರಾಟಗಾರ ಜಯಂತ್ ಟಿ ಅವರು ನೇರವಾಗಿ ಎಸ್‌ಐಟಿ ಕಚೇರಿಗೆ…
