Dharwad: ಕ್ರೀಡಾ ಸಂಕೀರ್ಣ ಉದ್ಘಾಟನೆ ಮಾಡಿದ ಕೇಂದ್ರ ಕ್ರೀಡಾ ಸಚಿವ
ಧಾರವಾಡ: ಜಿಲ್ಲೆಯ ಕ್ರೀಡಾಪಟುಗಳ ದಶಕಗಳ ಕನಸಾಗಿದ್ದ ಸುಸಜ್ಜಿತ ಕ್ರೀಡಾ ಸಂಕೀರ್ಣವನ್ನು (Dharwad) ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಲೋಕಾರ್ಪಣೆಗೊಳಿಸಿದರು. ಏನೆಲ್ಲಾ ಸೌಲಭ್ಯಗಳಿದೆ? NMDC ಮತ್ತು ONGC ಸಂಸ್ಥೆಗಳ CSR ಅನುದಾನದಡಿ 50 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಈ ಸಂಕೀರ್ಣದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಈಜುಕೊಳ, ಕಬಡ್ಡಿ ಅಂಕಣ, ಬ್ಯಾಡ್ಮಿಂಟನ್ ಕೋರ್ಟ್, ಜಿಮ್ ಮತ್ತು ವೈದ್ಯಕೀಯ ಸೌಲಭ್ಯಗಳಂತಹ ಅತ್ಯಾಧುನಿಕ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶಾಸಕ ಅರವಿಂದ್ ಬೆಲ್ಲದ್, ವಿಧಾನಪರಿಷತ್…
