Upendra Dwivedi: ಶ್ರೀಲಂಕಾ ಅಧಿಕಾರಿಗಳ ಜೊತೆ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮಾತುಕತೆ
ನವದೆಹಲಿ: ಭಾರತದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ (Upendra Dwivedi) ಅವರು ಎರಡು ದಿನಗಳ ಶ್ರೀಲಂಕಾ ಪ್ರವಾಸದಲ್ಲಿದ್ದು, ಅನೇಕ ಹಿರಿಯ ಅಧಿಕಾರಿಗಳನ್ನ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಶ್ರೀಲಂಕಾ ಸೇನೆಯ ಕಮಾಂಡರ್, ರಕ್ಷಣಾ ಉಪ ಸಚಿವರು ಮತ್ತು ರಕ್ಷಣಾ ಕಾರ್ಯದರ್ಶಿ ಸೇರಿದಂತೆ ಹಿರಿಯ ಮಿಲಿಟರಿ ಮತ್ತು ನಾಗರಿಕ ನಾಯಕತ್ವದೊಂದಿಗೆ ಮಾತುಕತೆ ನಡೆಸಿದ್ದು, ರಕ್ಷಣಾ ತರಬೇತಿ ಸಹಕಾರ, ಸಾಮರ್ಥ್ಯ ವೃದ್ಧಿ ಮತ್ತು ಪ್ರಾದೇಶಿಕ ಭದ್ರತೆಯಂತಹ ಪರಸ್ಪರ ಆಸಕ್ತಿಯ ವಿಷಯಗಳ ಮೇಲೆ ಚರ್ಚೆಗಳು ನಡೆದಿವೆ ಎನ್ನುವ ಮಾಹಿತಿ…
