TOP NEWS
Supreme court about CJP protest and responsibilities

Supreme Court: ಪ್ರತಿಭಟನೆಯಲ್ಲಿ ಜವಾಬ್ದಾರಿ ನಿಗದಿಪಡಿಸದಿದ್ದರೆ ತನಿಖೆಗೆ ಬೆಲೆಯಿಲ್ಲ: ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಎಚ್ಚರಿಕೆ

ನವದೆಹಲಿ: ದೇಶಾದ್ಯಂತ ಸದ್ದು ಮಾಡಿದ್ದ ಪರೀಕ್ಷಾ ಅಕ್ರಮ ಮತ್ತು ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕಾಕ್‌ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆ ವೇಳೆ ಪೊಲೀಸರ ಅತಿಯಾದ ಬಲಪ್ರಯೋಗ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕಟ್ಟುನಿಟ್ಟಿನ ಕ್ರಮವಾಗಬೇಕು ಎಂದ ಸುಪ್ರೀಂ “ಪ್ರತಿಭಟನೆಯಲ್ಲಿ ಯಾರೇ ಅತಿಯಾಗಿ ನಡೆದುಕೊಂಡಿದ್ದರೂ, ಕಾನೂನು ಕೈಗೆತ್ತಿಕೊಂಡಿದ್ದರೂ ಅವರ ಮೇಲೆ ಕಟ್ಟುನಿಟ್ಟಿನ ಕ್ರಮವಾಗಬೇಕು. ತಪ್ಪಿತಸ್ಥರ ಜವಾಬ್ದಾರಿಯನ್ನು ನಿಗದಿಪಡಿಸದಿದ್ದರೆ ಅಂತಹ ತನಿಖೆಗೆ ಯಾವುದೇ…

Read More
Supreme Court Sounds Alarm Over Vanishing Joint Families Issues Stern Warning to Parents Replacing Parenting with Gadgets

Supreme Court: ಅವಿಭಕ್ತ ಕುಟುಂಬಗಳ ಕಣ್ಮರೆಗೆ ಸುಪ್ರೀಂ ಕಳವಳ: ಮಕ್ಕಳ ಕೈಗೆ ಗ್ಯಾಜೆಟ್ ಇಡುವ ಪೋಷಕರಿಗೆ ಕೋರ್ಟ್ ಗಂಭೀರ ಎಚ್ಚರಿಕೆ

ನವದೆಹಲಿ: ಭಾರತದ ಸಾಂಪ್ರದಾಯಿಕ ಅವಿಭಕ್ತ ಕುಟುಂಬ ವ್ಯವಸ್ಥೆಯು ದಿನದಿಂದ ದಿನಕ್ಕೆ ಕ್ಷೀಣಿಸುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ (Supreme Court) ತೀವ್ರ ಕಳವಳ ವ್ಯಕ್ತಪಡಿಸಿದೆ. ಜಂಟಿ ಕುಟುಂಬಗಳ ಕಣ್ಮರೆ ಮತ್ತು ಮಕ್ಕಳ ಪಾಲನೆಗಾಗಿ ಪೋಷಕರು ಗ್ಯಾಜೆಟ್‌ಗಳ ಮೇಲೆ ಅತಿಯಾಗಿ ಅವಲಂಬಿತವಾಗುತ್ತಿರುವುದು ಭವಿಷ್ಯದಲ್ಲಿ ತೀವ್ರ ಸಾಮಾಜಿಕ ಪರಿಣಾಮಗಳನ್ನು ಬೀರಬಹುದು ಎಂದು ಗಂಭೀರ ಎಚ್ಚರಿಕೆ ನೀಡಿದೆ. ಹನಿಮೂನ್ ವೇಳೆಯಲ್ಲಿ ಪತಿಯ ಕೊಲೆಗೆ ಸಂಚು ರೂಪಿಸಿದ ಆರೋಪ ಹೊತ್ತಿರುವ ಸೋನಂ ರಘುವಂಶಿ ಎಂಬಾಕೆಯ ಹೈಪ್ರೊಫೈಲ್ ‘ರಾಜಾ ರಘುವಂಶಿ ಹತ್ಯೆ ಪ್ರಕರಣ’ದ ಮೇಲ್ಮನವಿ ವಿಚಾರಣೆ ನಡೆಸುವ…

Read More
Supreme court about CJP protest and responsibilities

Supreme Court: ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದಿದೆ ಎನ್ನಲಾದ ಪೊಲೀಸ್ ದೌರ್ಜನ್ಯವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ (Supreme Court) ಸ್ಪಷ್ಟವಾಗಿ ನಿರಾಕರಿಸಿದೆ. “ನಿಮ್ಮ ಸಮಯ ಮತ್ತು ನಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ” ಎಂದು ಶೀರ್ಷಪೀಠವು ಅರ್ಜಿದಾರರ ಪರ ವಕೀಲರಿಗೆ ನೇರವಾಗಿ ಹೇಳಿದೆ. ಇತ್ತೀಚೆಗೆ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ನಡೆಸಿದ ಆನ್‌ಲೈನ್ ಕರೆಗೆ ಓಗೊಟ್ಟು, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ…

Read More
Raja Raghuvanshi Murder Case Supreme Court Issues Tough Ultimatum to Honeymoon Killer Sonam

Supreme Court: ರಾಜಾ ರಘುವಂಶಿ ಹತ್ಯೆ ಕೇಸ್: ಹನಿಮೂನ್ ಕೊಲೆ ಆರೋಪಿ ಸೋನಮ್‌ಗೆ ಸುಪ್ರೀಂ ಕೋರ್ಟ್ ಕಠಿಣ ಗಡುವು

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಇಂದೋರ್ ಮೂಲದ ಉದ್ಯಮಿ ರಾಜಾ ರಘುವಂಶಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸೋನಮ್ ರಘುವಂಶಿಗೆ ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ಎರಡು ಕಠಿಣ ಆಯ್ಕೆಗಳನ್ನು ನೀಡಿದೆ. ಹನಿಮೂನ್ ಪ್ರವಾಸದಲ್ಲಿದ್ದಾಗ ತನ್ನ ಪತಿಯ ಕೊಲೆಗೆ ಸಂಚು ರೂಪಿಸಿ ಕೃತ್ಯ ಎಸಗಿದ ಗಂಭೀರ ಆರೋಪ ಎದುರಿಸುತ್ತಿರುವ ಸೋನಮ್‌ಗೆ ಮೇಘಾಲಯದ ವಿಚಾರಣಾ ನ್ಯಾಯಾಲಯ ಮತ್ತು ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದವು. ಇದನ್ನು ಪ್ರಶ್ನಿಸಿ ಮೇಘಾಲಯ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ…

Read More
Ram Mandir Donation Theft SC Proposes Reforming SIT Warns Against Politicisation

Ram Mandir: ಶ್ರೀರಾಮ ಮಂದಿರದ ಕಾಣಿಕೆ ಎಣಿಕೆಯಲ್ಲೇ ವಂಚನೆ, ಎಸ್‌ಐಟಿ ಮರುರಚನೆಗೆ ಸುಪ್ರೀಂ ಆದೇಶ

ನವದೆಹಲಿ: ಅಯೋಧ್ಯೆಯ ಶ್ರೀರಾಮ ಮಂದಿರದ (Ram mandir) ದೇಣಿಗೆ ಹಣ ಕಳ್ಳತನವಾಗಿರುವ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವನ್ನು (SIT) ಪುನರ್ರಚಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ಈ ಅತ್ಯಂತ ಸೂಕ್ಷ್ಮ ವಿಚಾರವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಬೇಡಿ ಎಂದು ರಾಜಕೀಯ ಪಕ್ಷಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿರುವ ಸರ್ವೋಚ್ಚ ನ್ಯಾಯಾಲಯ, ಯಾವುದೇ ಪ್ರಭಾವಕ್ಕೆ ಒಳಗಾಗದೆ ತನಿಖೆ ಅತ್ಯಂತ ಪಾರದರ್ಶಕವಾಗಿ ನಡೆಯಬೇಕು ಎಂದು ಸ್ಪಷ್ಟಪಡಿಸಿದೆ. ಈ ಮಧ್ಯೆ, ಉತ್ತರ ಪ್ರದೇಶ ಸರ್ಕಾರ ರಚಿಸಿರುವ ಎಸ್‌ಐಟಿ ತಂಡವು ತನ್ನ…

Read More
Ram Mandir Donation Theft SC Proposes Reforming SIT Warns Against Politicisation

Supreme Court: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ 38 ಕ್ಕೆ ಏರಿಕೆ: ಸಂಸತ್ತಿನಲ್ಲಿ ಮಹತ್ವದ ತಿದ್ದುಪಡಿ ವಿಧೇಯಕ ಮಂಡನೆ

ದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಬಾಕಿ ಉಳಿದಿರುವ ಲಕ್ಷಾಂತರ ಪ್ರಕರಣಗಳ ಶೀಘ್ರ ವಿಲೇವಾರಿಗೆ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ದೇಶದ ಅತ್ಯುನ್ನತ ನ್ಯಾಯಾಲಯದ ಒಟ್ಟು ನ್ಯಾಯಮೂರ್ತಿಗಳ ಸಂಖ್ಯೆಯನ್ನು ಹೆಚ್ಚಿಸಲು ನೂತನ ವಿಧೇಯಕವನ್ನು ಸಂಸತ್ತಿನಲ್ಲಿ ಮಂಡಿಸಲಾಗಿದೆ. ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರ, ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ‘ಸುಪ್ರೀಂ ಕೋರ್ಟ್ (ನ್ಯಾಯಾಧೀಶರ ಸಂಖ್ಯೆ) ತಿದ್ದುಪಡಿ ವಿಧೇಯಕ, 2026’ ಅನ್ನು ಲೋಕಸಭೆಯಲ್ಲಿ ಮಂಡಿಸಿದರು. 38ಕ್ಕೆ ಏರಿಸಲು ಸಿದ್ಧತೆ ಈ ಹೊಸ…

Read More
Bhojshala Dispute SC Directs Madhya Pradesh Govt to Provide Alternative Open Space for Friday Prayers

Bhojshala: ಭೋಜ್‌ಶಾಲಾ ವಿವಾದ: ಶುಕ್ರವಾರದ ನಮಾಜ್‌ಗೆ ಪರ್ಯಾಯ ಜಾಗ ನೀಡಲು ಮಧ್ಯಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ!

ನವದೆಹಲಿ: ಭೋಜ್‌ಶಾಲಾ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Bhojshala) ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಧಾರ್ ಜಿಲ್ಲೆಯ ವಿವಾದಿತ ಭೋಜ್‌ಶಾಲಾ ಆವರಣದಲ್ಲಿ ಶುಕ್ರವಾರದ ನಮಾಜ್ ಸಲ್ಲಿಸಲು ಪರ್ಯಾಯವಾಗಿ ತೆರೆದ ಜಾಗವನ್ನು ಒದಗಿಸುವಂತೆ ಮಧ್ಯಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಎರಡೂ ಕಡೆಯ ಹಕ್ಕುಗಳನ್ನು ಗಮನದಲ್ಲಿಟ್ಟುಕೊಂಡು, ಮುಸ್ಲಿಂ ಸಮುದಾಯದ ಅರ್ಜಿದಾರರಿಗೆ ಮಧ್ಯಾಹ್ನ 1:00 ರಿಂದ 3:00 ರವರೆಗೆ ನಮಾಜ್ ಮಾಡಲು ಮುಕ್ತ ಸ್ಥಳಾವಕಾಶ ಕಲ್ಪಿಸಬೇಕು ಮತ್ತು ಇದಕ್ಕೆ ಅಗತ್ಯವಿರುವ ವ್ಯವಸ್ಥೆ ಹಾಗೂ ನಿರ್ವಹಣೆಯನ್ನು ಸರ್ಕಾರವೇ…

Read More