Supriya Sule: ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮೊದಲು ಸಂಸತ್ತಿನಲ್ಲಿ ಮಂಡನೆಯಾಗಲಿ: ಸುಪ್ರಿಯಾ ಸುಳೆ ಆಗ್ರಹ
ನವದೆಹಲಿ: ದೇಶದಲ್ಲಿ ಕ್ಷೇತ್ರ ಪುನರ್ವಿಂಗಡಣೆ (ಡಿಲಿಮಿಟೇಶನ್) ಹಾಗೂ ಮಹಿಳಾ ಮೀಸಲಾತಿ ಜಾರಿಯ ಕುರಿತು ಆಡಳಿತ ಮತ್ತು ವಿಪಕ್ಷಗಳ ನಡುವೆ ತೀವ್ರ ರಾಜಕೀಯ ಚರ್ಚೆ ನಡೆಯುತ್ತಿರುವ ನಡುವೆಯೇ, ಎನ್‌ಸಿಪಿ (ಶರದ್ ಪವಾರ್ ಬಣ) ಸಂಸದೆ ಸುಪ್ರಿಯಾ ಸುಳೆ ( Supriya Sule) ಮಹತ್ವದ ಹೇಳಿಕೆ ನೀಡಿದ್ದಾರೆ. ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಮಸೂದೆಯ ಅಂಶಗಳ ಬಗ್ಗೆ ರಾಜಕೀಯ ಪಕ್ಷಗಳು ಚರ್ಚೆ ನಡೆಸುವ ಮುನ್ನ, ಮೊದಲು ಅದನ್ನು ಸಂಸತ್ತಿನಲ್ಲಿ ಮಂಡಿಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸೂದೆಯ ಪೂರ್ಣ…
