Vijay Deverakonda: “ತೆಲುಗಿನಲ್ಲಿ ಅಲ್ಲ, ಕನ್ನಡದಲ್ಲೇ ನೋಡುವೆ”: ‘ಪ್ರೇಮದ ಊರಲಿ’ ಚಿತ್ರದ ಬಗ್ಗೆ ನಟ ವಿಜಯ್ ದೇವರಕೊಂಡ ಮಾತು!
ಬೆಂಗಳೂರು: ಸಾಮಾಜಿಕ ಜಾಲತಾಣಗಳು ಮತ್ತು ಮನರಂಜನಾ ಲೋಕದಲ್ಲಿ ಸದಾ ಸುದ್ದಿಯಲ್ಲಿರುವ ಟಾಲಿವುಡ್ನ ಸ್ಟಾರ್ ಜೋಡಿ ವಿಜಯ್ ದೇವರಕೊಂಡ (Vijay Deverakonda) ಹಾಗೂ ರಶ್ಮಿಕಾ ಮಂದಣ್ಣ ಮತ್ತೊಮ್ಮೆ ಒಟ್ಟಿಗೆ ತೆರೆಹಂಚಿಕೊಳ್ಳಲು ಸಜ್ಜಾಗಿದ್ದಾರೆ. ಜತೆಯಾಗಿ ನಟಿಸಿರುವ ಬಹುನಿರೀಕ್ಷಿತ ‘ರಣಬಾಲಿ’ ಸಿನಿಮಾ ಅಕ್ಟೋಬರ್ 16ರಂದು ಅದ್ಧೂರಿಯಾಗಿ ತೆರೆಗೆ ಬರಲಿದೆ. ‘ಗೀತ ಗೋವಿಂದಂ’ ಹಾಗೂ ‘ಡಿಯರ್ ಕಾಮ್ರೇಡ್’ ಚಿತ್ರಗಳ ಮೂಲಕ ಕನ್ನಡ ಹಾಗೂ ತೆಲುಗು ಸಿನಿಪ್ರೇಕ್ಷಕರ ಮನ ಗೆದ್ದಿದ್ದ ಈ ಜನಪ್ರಿಯ ಜೋಡಿಯ ಸಿನಿಮಾ ಬಿಡುಗಡೆಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ವಿಶೇಷವೆಂದರೆ, ಈ…
